🚨ಬ್ರೇಕಿಂಗ್ ನ್ಯೂಸ್, ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ – ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಉಡುಪಿ ಕಾಂಗ್ರೆಸ್ ಮುಖಂಡರು..!🚨

ಮಣಿಪಾಲ ಜು.11

ಇಂದು ಬೆಳಗ್ಗೆ ಮಣಿಪಾಲದ ಕ್ರೈಸ್ಟ್ ಸ್ಕೂಲ್ ಬಸ್, ಹೆರ್ಗ ಗ್ರಾಮದ ಸರಳೇಬೆಟ್ಟು ಕೊಡಂಗಯಿಯಲ್ಲಿ ಮಳೆಯ ಕಾರಣದಿಂದ ಮಣ್ಣು ಕುಸಿದು ಅಪಘಾತಕ್ಕೀಡಾದ ಘಟನೆ ನಡೆದಿದೆ.

ಈ ದುರ್ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಉನ್ನತ ನಿಯೋಗ ತಕ್ಷಣವೇ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ಭೇಟಿ ನೀಡಿತು.

🏥 ಆಸ್ಪತ್ರೆಯಲ್ಲಿ ಸಾಂತ್ವನ:-

ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಭೇಟಿಯಾದ ಕಾಂಗ್ರೆಸ್ ಮುಖಂಡರು, ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಮಾತುಕತೆ ನಡೆಸಿ ಆಕೆಯ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

ಬಳಿಕ ಆತಂಕದಲ್ಲಿದ್ದ ಬಾಲಕಿ ಹಾಗೂ ಆಕೆಯ ಪೋಷಕರಿಗೆ ಧೈರ್ಯ ತುಂಬಿ, ಪಕ್ಷದ ವತಿಯಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.


🏫 ಶಾಲಾ ಆಡಳಿತ ಮಂಡಳಿಗೆ ಎಚ್ಚರಿಕೆ:-

ನಂತರ ಕ್ರೈಸ್ಟ್ ಸ್ಕೂಲ್‌ಗೆ ಭೇಟಿ ನೀಡಿದ ನಿಯೋಗ, ಶಾಲೆಯ ಮುಖ್ಯೋಪಾಧ್ಯಾಯಿನಿಯೊಂದಿಗೆ ಸಭೆ ನಡೆಸಿತು.

ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಶಾಲಾ ವಾಹನಗಳ ಸಂಚಾರದ ವೇಳೆ ಸಂಪೂರ್ಣ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳ ಪ್ರಾಣದ ಜೊತೆ ಚಲ್ಲಾಟವಾಡ ಬಾರದು ಎಂದು ಆಡಳಿತ ಮಂಡಳಿಗೆ ಕಠಿಣ ಎಚ್ಚರಿಕೆಯನ್ನು ನೀಡಿದರು.

🤝 ಉಪಸ್ಥಿತರಿದ್ದ ಗಣ್ಯರು:-

ಈ ಸಂದರ್ಭದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳ ಹಿತಕಾಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಪ್ರಮುಖ ನಾಯಕರು ಸ್ಥಳದಲ್ಲಿದ್ದರು.

ಅಶೋಕ್ ಕುಮಾರ್ ಕೊಡವೂರು:-

(ಅಧ್ಯಕ್ಷರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ)

ಶ್ರೀಮತಿ ಜ್ಯೋತಿ ಹೆಬ್ಬಾರ್:-

(ಅಧ್ಯಕ್ಷರು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್)

ರಮೇಶ್ ಕಾಂಚನ್:-

(ಅಧ್ಯಕ್ಷರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ)

ಸುಕೇಶ್ ಕುಂದರ್ ಹಾಗೂ ಶರತ್ ಶೆಟ್ಟಿ:-

(ಉಪಾಧ್ಯಕ್ಷರು, ಉಡುಪಿ ಬ್ಲಾಕ್ ಕಾಂಗ್ರೆಸ್)

ಸತೀಶ್ ಕುಮಾರ್ ಮಂಚಿ:-

(ಪ್ರಧಾನ ಕಾರ್ಯದರ್ಶಿ, ಉಡುಪಿ ಬ್ಲಾಕ್ ಕಾಂಗ್ರೆಸ್)

ಸಂಜಯ್ ಆಚಾರ್ಯ:-

(ಪ್ರಧಾನ ಕಾರ್ಯದರ್ಶಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್)

ಸಾರ್ವಜನಿಕರ ಕಷ್ಟಕ್ಕೆ ತಕ್ಷಣ ಸ್ಪಂದಿಸುವ ಮೂಲಕ ಉಡುಪಿ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ಜನಪರ ಕಾಳಜಿಯನ್ನು ಮೆರೆದಿದ್ದಾರೆ.

ವರದಿ :ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button