ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ರಾಜಾ ವೆಂಕಟಪ್ಪ ನಾಯಕ ಮಧ್ಯಪ್ರವೇಶ 20 ದಿನಗಳ ಸಮಸ್ಯೆಗೆ ಅಂತ್ಯ – ಟ್ರಾನ್ಸ್‌ಫಾರ್ಮರ್ ಒದಗಿಸಿದ ಅಧಿಕಾರಿಗಳು.

ಗವಿಗಟ್ ಜು.11

ಮಾನ್ವಿ ತಾಲೂಕಿನ ಗವಿಗಟ್ ಗ್ರಾಮದಲ್ಲಿ ಕಳೆದ ಸುಮಾರು 20 ದಿನಗಳಿಂದ ಟ್ರಾನ್ಸ್‌ಫಾರ್ಮರ್ ದೋಷದಿಂದ ವಿದ್ಯುತ್ ಸಂಪರ್ಕ ಸ್ಥಗಿತ ಗೊಂಡು ಗ್ರಾಮಸ್ಥರು ಹಾಗೂ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು.

ಈ ಕುರಿತು ಗ್ರಾಮಸ್ಥರು ಮಾನ್ವಿ ನಿಕಟ ಪೂರ್ವ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ, ಅವರು ಗ್ರಾಮಸ್ಥರೊಂದಿಗೆ ಮಾನ್ವಿಯ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ (GESCOM) ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಗ್ರಾಮದ ವಿದ್ಯುತ್ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟು, ತಕ್ಷಣವೇ ಹೊಸ ಟ್ರಾನ್ಸ್‌ಫಾರ್ಮರ್ (TC) ಒದಗಿಸಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿದರು. ರಾಜಾ ವೆಂಕಟಪ್ಪ ನಾಯಕ ಅವರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮ ಕೈಗೊಂಡು ಟ್ರಾನ್ಸ್‌ಫಾರ್ಮರ್ ಒದಗಿಸಿದ್ದು, ಗವಿಗಟ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಮರು ಸ್ಥಾಪಿಸುವ ಕಾರ್ಯ ಆರಂಭಿಸಿದರು.

ಇದರಿಂದ ಹಲವು ದಿನಗಳಿಂದ ಕತ್ತಲಲ್ಲಿದ್ದ ಗ್ರಾಮಕ್ಕೆ ಮತ್ತೆ ವಿದ್ಯುತ್ ಸಂಪರ್ಕ ದೊರೆತಿದ್ದು, ಗ್ರಾಮಸ್ಥರು ಹಾಗೂ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಿದ ರಾಜಾ ವೆಂಕಟಪ್ಪ ನಾಯಕ ದೊರೆ ಅವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗವಿಗಟ್ ಗ್ರಾಮದ ಗ್ರಾಮಸ್ಥರು, ರೈತ ಬಂಧುಗಳು, ಮುಖಂಡರು ಹಾಗೂ ಜೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button