ರಾಮಕೃಷ್ಣ ಮಹಾ ಸಂಘಕ್ಕೆ ಶ್ರೀಮಾತೆಯವರ ಮಾರ್ಗದರ್ಶನ ವಿಶಿಷ್ಟವಾದದ್ದು – ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಜು.11

ಸ್ವಾಮಿ ವಿವೇಕಾನಂದರಿಂದ ಸ್ಥಾಪಿತವಾದ ರಾಮಕೃಷ್ಣ ಮಹಾ ಸಂಘಕ್ಕೆ ಹಾಗೂ ಅಲ್ಲಿನ ಸಂನ್ಯಾಸಿ ಬ್ರಹ್ಮ ಚಾರಿಗಳಿಗೆ ಶ್ರೀಮಾತೆ ಶಾರದಾದೇವಿಯವರು ನೀಡುತ್ತಿದ್ದ ಸೂಕ್ತ ಸಲಹೆ-ಸೂಚನೆ ಮಾರ್ಗದರ್ಶನ ಅತ್ಯಂತ ವಿಶಿಷ್ಟವಾದದ್ದು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮುನ್ನಡೆಸುವ ಮಹಾಶಕ್ತಿ” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ಸದ್ಭಕ್ತರಿಂದ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಕರ್ಮಯೋಗದ ಶ್ಲೋಕಗಳ ಕಲಿಕಾ ತರಗತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ತಳುಕಿನ ತೊಯಜಾಕ್ಷಿ, ವೀರಮ್ಮ, ರಶ್ಮಿ, ಸಂಗೀತ, ಶೈಲಜಾ, ಕೃಷ್ಣವೇಣಿ, ವಿಜಯಲಕ್ಷ್ಮೀ, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಭಾಗ್ಯಲಕ್ಷ್ಮೀ, ದ್ರಾಕ್ಷಾಯಣಿ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

