ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ರಮದಲ್ಲಿ ಎಲ್ಲಾ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸಿ – ಶಾಸಕ ಶ್ರೀ ಎನ್.ವೈ ಗೋಪಾಲಕೃಷ್ಣ ಮನವಿ.
ರಾಂಪುರ ಜು.12

ಇತ್ತೀಚಿಗೆ ರಾಂಪುರದ ತಮ್ಮ ನಿವಾಸಕ್ಕೆ ಮೊಳಕಾಲ್ಮೂರು ತಹಶೀಲ್ದಾರ್ ಹಾಗೂ ಚುನಾವಣಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ರಮದ ಅಂಗವಾಗಿ ಶಾಸಕ ಶ್ರೀ ಎನ್.ವೈ ಗೋಪಾಲಕೃಷ್ಣ ಅವರ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಸಮಸ್ತ ಅರ್ಹ ಮತದಾರರು SIR ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಿ ತಮ್ಮ ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಮತ್ತು ನವೀಕರಣ ಮಾಡಿಸಿ ಕೊಳ್ಳುವಂತೆ ಮನವಿ ಮಾಡಿದರು.
ಮತದಾರರ ಪಟ್ಟಿಯು ನಿಖರವಾಗಿರುವುದು ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ಈ ಪ್ರಕ್ರಿಯೆಯಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳುವುದು ಅತ್ಯಗತ್ಯ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ಚುನಾವಣಾ ಇಲಾಖೆಯ ಅಧಿಕಾರಿಗಳು SIR ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ, ಸಾರ್ವಜನಿಕರು ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಸಲ್ಲಿಸಿ ಈ ಅಭಿಯಾನವನ್ನು ಯಶಸ್ವಿ ಗೊಳಿಸುವಂತೆ ಕೋರಿದರು. ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ತಿಪ್ಪೇಸ್ವಾಮಿ. ಎಚ್.(ಮೀನಕೆರಿ)ಹೊಂಬಾಳೆ ಮೊಳಕಾಲ್ಮುರು

