ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ – ಮೂವರ ಸಾವು.
ಕವಿತಾಳ ಜು.12

ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಮನಗೂಳಿ ಹತ್ತಿರ ಶುಕ್ರವಾರ ನಡೆದಿದೆ.
ಸಮೀಪದ ಮಸ್ಕಿ ತಾಲೂಕಿನ ಹಾಲಾಪುರ ಹೋಬಳಿ ವ್ಯಾಪ್ತಿಯ ಯದ್ದಲದಿನ್ನಿ ಕ್ಯಾಂಪ್ ನಿವಾಸಿ ರಾಘವೇಂದ್ರ ಅವರು ತಮ್ಮ ಸ್ವಂತ ಕಾರಿನಲ್ಲಿ ಶಿರಡಿಗೆ ಪ್ರವಾಸ ತೆರಳುತ್ತಿದ್ದರು ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ರಾಘವೇಂದ್ರ ಅವರ ಪತ್ನಿ ಸತ್ಯವೇಣಿ (38) ಹಿರಿಯ ಪುತ್ರ ಎಂಬಿಬಿಎಸ್ ಓದುತ್ತಿದ್ದ ಹರಿ ವೆಂಕಟರಾವ್ (20) ಮತ್ತು ಕಿರಿಯ ಪುತ್ರ ಎಂಜಿನಿಯರಿಂಗ್ ವಿದ್ಯಾರ್ಥಿ ಯಶವಂತ (18) ಅವರು ಸ್ಥಳದಲ್ಲಿಯೇ ಸಾವಿಗಿಡಾಗಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ರಾಘವೇಂದ್ರ ಅವರಿಗೆ ತೀವ್ರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

