ಮಾಜಿ ರಾಜ್ಯ ಸಭಾ ಸದಸ್ಯರು ಹಾಗೂ ಅಧ್ಯಕ್ಷರು ಶ್ರೀ ಎ.ಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಹೆಚ್. ಹನುಮಂತಪ್ಪ ಅವರ ನಿಧನಕ್ಕೆ -ಭಾವಪೂರ್ಣ ಶ್ರದ್ಧಾಂಜಲಿ.

ಮೊಳಕಾಲ್ಮುರು ಜು.12

ಮಾಜಿ ರಾಜ್ಯ ಸಭಾ ಸಂಸದರು ಹಾಗೂ ಶ್ರೀ ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಅಧ್ಯಕ್ಷರಾಗಿದ್ದ ಹಿರಿಯ ರಾಜಕಾರಣಿ ಶ್ರೀ ಹೆಚ್. ಹನುಮಂತಪ್ಪ ಅವರು ಇಂದು ಮಧ್ಯಾಹ್ನ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖ ಹಾಗೂ ಆಘಾತವಾಗಿದೆ.

ಸಾರ್ವಜನಿಕ ಜೀವನದಲ್ಲಿ ಹಲವು ದಶಕಗಳ ಕಾಲ ಜನಸೇವೆ ಸಲ್ಲಿಸಿದ ಅವರು, ತಮ್ಮ ಸರಳ ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಕರ್ತವ್ಯ ನಿಷ್ಠೆಯ ಮೂಲಕ ಜನರ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆ ರಾಜ್ಯಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿ. 🙏

– ಶ್ರೀ ಎನ್. ವೈ. ಗೋಪಾಲಕೃಷ್ಣಶಾಸಕರು, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button