ಹಿರಿಯ ರಾಜಕಾರಣಿ ಶ್ರೀ ಎಚ್.ಹನುಮಂತಪ್ಪ ಅವರಿಗೆ – ಶಾಸಕ ಎನ್. ವೈ.ಗೋಪಾಲಕೃಷ್ಣ ಅವರ ಅಂತಿಮ ನಮನ.

ಮೊಳಕಾಲ್ಮೂರು ಜು.13

ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ಇಂದು ಮಾಜಿ ರಾಜ್ಯ ಸಭಾ ಸದಸ್ಯರು ಹಾಗೂ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್.ಹನುಮಂತಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಪೂರ್ವಕ ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಶ್ರೀ ಎಚ್. ಹನುಮಂತಪ್ಪ ಅವರು ಸಾರ್ವಜನಿಕ ಜೀವನದಲ್ಲಿ ಸಲ್ಲಿಸಿದ ಸೇವೆ, ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ಬದ್ಧತೆ ಹಾಗೂ ಸಮಾಜದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

ಶಾಸಕರಾದ ಶ್ರೀ ಎನ್. ವೈ ಗೋಪಾಲಕೃಷ್ಣ ಅವರು ಮೃತರ ಕುಟುಂಬದ ಸದಸ್ಯರಿಗೆ ಸಂತಾಪ ಸೂಚಿಸಿ, ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ವಿವಿಧ ಜನ ಪ್ರತಿನಿಧಿಗಳು, ರಾಜಕೀಯ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಶ್ರೀ ಎಚ್. ಹನುಮಂತಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್.(ಮೀನಕೆರಿ) ಹೊಂಬಾಳೆ ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button