ಮೊಬೈಲ್ ದುರ್ಬಳಕೆ ಯಿಂದ ದೂರವಿರಿ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿಯಿರಿ – ಡಾ, ಹೈಂದವಿ.ಗುಪ್ತಾಜೀ ಕರೆ.
ಮಾನ್ವಿ ಜು.14

ಪಟ್ಟಣದ ಶಾರದಾ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಾರದಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಹೈಂದವಿ ಮಧುಸೂದನ್ ಗುಪ್ತಾಜೀ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗಳಲ್ಲಿನ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಹಾಳು ಮಾಡಿ ಕೊಳ್ಳುತ್ತಿದ್ದಾರೆ.
ಆದ್ದರಿಂದ ಉಪನ್ಯಾಸಕರು ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ಕಲಿಸುವುದರ ಜೊತೆಗೆ ಮೊಬೈಲ್ ನಲ್ಲಿರುವ ತಂತ್ರಜ್ಞಾನವನ್ನು ಸರಿಯಾದ ರೀತಿಯಲ್ಲಿ ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಬೇಕು” ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಲ್ಮಠದ ಅನುದಾನಿತ ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಶಾಂತಮೂರ್ತಿ ಸ್ವಾಮಿ ಕೊಟ್ನೆಕಲ್ ಮಾತನಾಡಿ ಶಿಕ್ಷಣವೇ ಶಕ್ತಿ ಉತ್ತಮ ಶಿಕ್ಷಣವನ್ನು ಪಡೆಯದಿದ್ದರೆ ಜೀವನದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. 1991 ರಿಂದ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮಾನ್ವಿಯಲ್ಲಿ ಶಾರದಾ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ ಡಾ, ಮಧುಸೂದನ್ ಗುಪ್ತಾಜೀ ಅವರ ಕನಸಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಒಳ್ಳೆಯ ಫಲಿತಾಂಶದ ಜೊತೆಗೆ ಉತ್ತಮ ಸಂಸ್ಕಾರವನ್ನು ಪಡೆದು ತಂದೆ-ತಾಯಿಯ ಕನಸನ್ನು ನನಸು ಮಾಡಬೇಕು ಎಂದು ಸಲಹೆ ನೀಡಿದರು.
ಬಿ.ಎಡ್ ಕಾಲೇಜಿನ ಹಿರಿಯ ಉಪನ್ಯಾಸಕರಾದ ಈರಣ್ಣ ಮರ್ಲಟ್ಟಿ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ವಿದ್ಯೆಯನ್ನು ಕಲಿತಾಗ ಮಾತ್ರ ವಿದ್ಯೆಯು ಮಸ್ತಕಕ್ಕೆ ಮುಟ್ಟುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾರದಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಬಿ.ಕಿಶೋರ್ ಕುಮಾರ್ ಸಂಸ್ಥೆಯ ಅಧ್ಯಕ್ಷರಾದ ಉಮಾಮಹೇಶ್ವರಿ ಮಧುಸೂದನ್ ಗುಪ್ತಾಜೀ ಬಿ.ಎಡ್ ಕಾಲೇಜಿನ ಪ್ರಾಚಾರ್ಯರಾದ ಡಾ, ಪರಮೇಶ್ವರಪ್ಪ ಗೋಪಶೆಟ್ಟಿ ಮತ್ತು ಡಿ.ಎಡ್ ಕಾಲೇಜಿನ ಪ್ರಾಚಾರ್ಯರಾದ ಹನುಮಂತಗೌಡ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ವೀರಭದ್ರಯ್ಯ ಹಿರೇಮಠ ಮಾತನಾಡಿ ನಮ್ಮ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ಅನುಭವದ ಬುದ್ಧಿ ಶಕ್ತಿಯನ್ನು ನೀಡಲಾಗುತ್ತಿದೆ. ವಿವಿಧ ಹಳ್ಳಿಗಳಿಂದ ಬಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಉತ್ತಮ ಫಲಿತಾಂಶ ಪಡೆಯಲು ಮಾರ್ಗದರ್ಶನ ನೀಡಲಾಗುತ್ತಿದೆ. ಮಧುಸೂದನ್ ಗುಪ್ತಾಜೀ ಅವರ ಉತ್ತಮ ಶಿಕ್ಷಣದ ಕನಸನ್ನು ನಮ್ಮ ಪಿಯುಸಿ ವಿದ್ಯಾರ್ಥಿಗಳ ಮೂಲಕ ನನಸು ಮಾಡುತ್ತೇವೆ” ಎಂದು ಹೇಳಿದರು.
ಕಾರ್ಯಕ್ರಮವನ್ನು ಪ್ರಿಯಾಂಕ ಮಾಡಗಿರಿ ನಿರೂಪಿಸಿದರು. ಮಹಾಲಕ್ಷ್ಮಿ ಸ್ವಾಗತಿಸಿದರು. ಯಲ್ಲಮ್ಮ ವಂದಿಸಿದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

