ಕೃಷಿ ಇಲಾಖೆ ವತಿಯಿಂದ ತಾಲೂಕಿನ ಎಲ್ಲಾ ರೈತರಿಗೆ ಕೃಷಿ ಯಂತ್ರೋಪಕರಣ ಮತ್ತು ಬೀಜ ಉಪಕರಣ ಗೊಬ್ಬರ ವಿತರಿಸಿದ – ಎನ್.ವೈ ಗೋಪಾಲಕೃಷ್ಣ ಶಾಸಕರು.
ಮೊಳಕಾಲ್ಮೂರು ಜು.17

ಇಂದು ರಾಂಪುರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮೊಳಕಾಲ್ಮೂರು ತಾಲೂಕು ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾದ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಜನಪ್ರಿಯ ಶಾಸಕರಾದ ಶ್ರೀ ಎನ್. ವೈ. ಗೋಪಾಲಕೃಷ್ಣ ಅವರು ರೈತ ಬಾಂಧವರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರಗಳನ್ನು ವಿತರಿಸಿದರು.
ಮತ್ತು ಮೊಳಕಾಲ್ಮೂರು ತಾಲೂಕು, ಮಳೆ ಬಾರದೆ ಕಂಗಲಾದ ರೈತರಿಗೆ ಬೆಳೆ ಪರಿಹಾರ ಮತ್ತು ಇನ್ಸರ್ಟ್ ರೈತರು ಕಟ್ಟಿದ ಇನ್ಸೂರೆನ್ಸ್ ಈ ವರ್ಷ ಬೆಳೆಯ ಲಾಸ್ ಆಗಿದ್ದರಿಂದ ರೈತರಿಗೆ ಇನ್ಸೂರೆನ್ಸ್ ಕಂಪನಿಯಿಂದ ಬೆಳೆ ಎಷ್ಟು ಲಾಸ್ ಆಗಿರುತ್ತದೆ ಅಷ್ಟೊಂದು ಇನ್ಸೂರೆನ್ಸ್ ಕ್ಲೈಮ್ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಇನ್ಸೂರೆನ್ಸ್ ಕಂಪನಿಯವರಿಗೆ ಮಾನ್ಯ ಶಾಸಕರು ಎನ್ ವೈ ಗೋಪಾಲಕೃಷ್ಣ ಇವರು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ಜನ ಪ್ರತಿನಿಧಿಗಳು, ರೈತ ಬಾಂಧವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್. ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

