ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಗಿರಿರಾಜ ಕೋಳಿ ವಿತರಣೆ ಕಾರ್ಯಕ್ರಮ – ಶಾಸಕರು ಎನ್.ವೈ ಗೋಪಾಲಕೃಷ್ಣ ಅವರಿಂದ ಜರುಗಿತು.
ರಾಂಪುರ ಜು.17

ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ರಾಂಪುರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ ಗಿರಿರಾಜ ಕೋಳಿ ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ಭಾಗವಹಿಸಿ, ಅರ್ಹ ಫಲಾನುಭವಿಗಳಿಗೆ ಗಿರಿರಾಜ ಕೋಳಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಕುಟುಂಬಗಳ ಆರ್ಥಿಕ ಸಬಲೀಕರಣ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ಇಂತಹ ಯೋಜನೆಗಳನ್ನು ಜಾರಿ ಗೊಳಿಸಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದು ತಮ್ಮ ಆದಾಯವನ್ನು ಹೆಚ್ಚಿಸಿ ಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪಶು ವೈದ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು, ಜನ ಪ್ರತಿನಿಧಿಗಳು ಹಾಗೂ ಅನೇಕ ಫಲಾನುಭವಿಗಳು ಉಪಸ್ಥಿತರಿದ್ದರು. ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್. ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

