ಶಾರದಾಮಾತೆಯವರ ಮಾತೃ ವಾತ್ಸಲ್ಯದಲ್ಲಿ – ಸರ್ವರಿಗೂ ಸಮ ಪಾಲಿತ್ತು.
ಚಳ್ಳಕೆರೆ ಜು.18

ನಾವು ಬದುಕುತ್ತಿರುವ ಭೂಮಿಯಂತೆ ಶ್ರೀಮಾತೆ ಶಾರದಾದೇವಿಯವರ ಮಾತೃವಾತ್ಸಲ್ಯದಲ್ಲಿ ಸರ್ವರಿಗೂ ಸಮಾನವಾದ ಪಾಲಿತ್ತು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮಾತೆಯ ಮಡಿಲು” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಜ್ಞಾನ ಯೋಗದ ಶ್ಲೋಕಗಳ ಕಲಿಕಾ ತರಗತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಸತ್ಸಂಗದಲ್ಲಿ ಶ್ರೀಮತಿ ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ವಿಜಯಲಕ್ಷ್ಮೀ, ಭಾಗ್ಯಲಕ್ಷ್ಮೀ, ದ್ರಾಕ್ಷಾಯಣಿ, ವೀರಮ್ಮ, ಶೈಲಜಾ, ಕೃಷ್ಣವೇಣಿ, ಸಂಗೀತ, ಕವಿತಾ, ಗೀತಾಲಕ್ಷ್ಮೀ, ಶಾರದಾಮ್ಮ, ಜಯಶೀಲಮ್ಮ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

