ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಶಸ್ತಿಗೆ – ಅಬ್ದುಲಘನಿ ಎಂ. ದೇವರಮನಿ ಆಯ್ಕೆ.
ಆಲಮೇಲ ಜು.18

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಜಿಲ್ಲಾ ಪತ್ರಿಕೋದ್ಯಮ ಪ್ರಶಸ್ತಿಗೆ ಆಲಮೇಲ ತಾಲೂಕು ಘಟಕದ ಅಬ್ದುಲಘನಿ ಎಂ. ದೇವರಮನಿ ಅವರು ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸುತ್ತಾ ಬಂದಿರುವ ಇವರು, ಸಮಾಜಮುಖಿ ವರದಿಗಾರಿಕೆ, ಜನಪರ ಸಮಸ್ಯೆಗಳನ್ನು ಬೆಳಕಿಗೆ ತರುವ ಕಾರ್ಯ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಾಳೆ (19.07.2026) ಪ್ರಶಸ್ತಿ ಪ್ರಧಾನ:-
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗ ಮಂದಿರದಲ್ಲಿ ಇಂದು ಹಮ್ಮಿಕೊಳ್ಳಲಾಗಿರುವ ‘ಪತ್ರಿಕಾ ದಿನಾಚರಣೆ’ ಸಮಾರಂಭದಲ್ಲಿ ಅಬ್ದುಲಘನಿ ಎಂ. ದೇವರಮನಿ ಅವರಿಗೆ ಈ ಪ್ರತಿ ಷ್ಠಿತ ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಅಬ್ದುಲಘನಿ ಎಂ. ದೇವರಮನಿ ಅವರ ಈ ಆಯ್ಕೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಪತ್ರಕರ್ತರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಗಣ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ ಹಿರೇಮಠ ಆಲಮೇಲ

