🚨ಬ್ರೇಕಿಂಗ್ ನ್ಯೂಸ್🚨ಕ್ರೀಡೆ ಸಮಾಜದಲ್ಲಿ ಏಕತೆ ಮತ್ತು ಸೌಹಾರ್ದತೆಯ ಸಂಕೇತ – ಅಜಿತ್ ಕುಮಾರ್ ಶೆಟ್ಟಿ.

ಬೆಂಗಳೂರು ಜು.20

“ಕ್ರೀಡೆಯು ಭಾಷೆ, ಧರ್ಮ, ಜಾತಿ ಹಾಗೂ ಪ್ರಾಂತ್ಯಗಳ ಎಲ್ಲ ಗಡಿಗಳನ್ನು ಮೀರಿ ಜನರನ್ನು ಒಂದಾಗಿಸುವ ಅದ್ಭುತ ಶಕ್ತಿಯನ್ನು ಹೊಂದಿದೆ” ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅವರು ಅಭಿಪ್ರಾಯ ಪಟ್ಟಿದ್ದಾರೆ.

FIFA ವಿಶ್ವಕಪ್ 2026ರ ಫೈನಲ್ ಪಂದ್ಯದ ಅಂಗವಾಗಿ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಈ ವಿಷಯ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಸ್ವಾಗತಿಸಿ, ಅವರೊಂದಿಗೆ ವಿಶ್ವಕಪ್ ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಹಂಚಿ ಕೊಂಡಿದ್ದು ಅವಿಸ್ಮರಣೀಯ ಅನುಭವ ಎಂದು ಅಜಿತ್ ಕುಮಾರ್ ಶೆಟ್ಟಿ ಸಂತಸ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಎನ್.ಎ. ಹ್ಯಾರಿಸ್ ಅವರ ವತಿಯಿಂದ ಮತ್ತು ಮಾಜಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮೊಹಮ್ಮದ್ ಹ್ಯಾರಿಸ್ ನಲ್ಪಾಡ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಐವೈಸಿ (IYC) ರಾಷ್ಟ್ರೀಯ ಕಾರ್ಯದರ್ಶಿ ಭವ್ಯ ಹಾಗೂ ಅಪಾರ ಸಂಖ್ಯೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾವಿರಾರು ಫುಟ್ಬಾಲ್ ಅಭಿಮಾನಿಗಳು ಭಾಗವಹಿಸಿದ್ದರು.

ಸಾವಿರಾರು ಯುವಕರ ಕ್ರೀಡಾ ಪ್ರೇಮ ಮತ್ತು ಸಂಭ್ರಮ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ, ಸ್ನೇಹ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಹೇಳಿದ ಅವರು, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ ಶ್ರೀ ಎನ್.ಎ. ಹ್ಯಾರಿಸ್ ಹಾಗೂ ಶ್ರೀ ಮೊಹಮ್ಮದ್ ಹ್ಯಾರಿಸ್ ನಲ್ಪಾಡ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ವರದಿ:ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button