ಜು. 26 ರಂದು ಸರಕಾರಿ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ – ಪ್ರಕಟಣೆಯಲ್ಲಿ ಸುರೇಶ್ ಕುರುಡಿ ತಿಳಿಸಿದ್ದಾರೆ.

ಮಾನ್ವಿ ಜು.25

ಬಳ್ಳಾರಿ ನಗರದ ಜೋಳದ ರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ಜು. 26 ರಂದು ಸಂಜೆ 4 ಕ್ಕೆ ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಯ ಸರಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿ.ಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಆಯ್ಕೆಯಾದ ನೌಕರರ ಮಕ್ಕಳು ಜು. 26 ರಂದು ಮಧ್ಯಾಹ್ನ 2 ರೊಳಗೆ ಹಾಜರಾಗಿ ರಾಯಚೂರು ಜಿಲ್ಲೆಯವರಿಗಾಗಿ ತೆರೆಯಲಾದ ಪ್ರತ್ಯೇಕ ಕೌಂಟರ್‌ನಲ್ಲಿ ನೋಂದಣಿ ಮಾಡಿ ಕೊಳ್ಳಬೇಕು ಶ್ರೀ ಪ್ರಸನ್ನಾನಂದ ಮಹಾ ಸ್ವಾಮೀಜಿಗಳು ಸಾನ್ನಿಧ್ಯವನ್ನು ವಹಿಸಲಿದು, ಸರಕಾರಿ ನೌಕರರ ಸಂಘದ ರಾಜ್ಯಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕು. ಹಾರಿಕಾ ಮಂಜುನಾಥ್ ಉಪನ್ಯಾಸ ನೀಡಲಿದ್ದಾರೆ ತಾಲೂಕಿನ ಸರಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸರಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಸುರೇಶ್ ಕುರುಡಿ ಪ್ರಕಟಣೆಯಲ್ಲಿ ಕೋರಿದ್ದಾರೆ ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button