ಬಂದ್ ಸೂಕ್ತವಲ್ಲ ಉಳಿದ ಕಾಮಗಾರಿ ಶೀಘ್ರ ಪೂರ್ಣ ಗೊಳಿಸಿ – ಸೈಯದ್ ನಜರುದ್ದೀನ್ ಖಾದ್ರಿ.

ಮಾನ್ವಿ ಜು.26

ಕಲ್ಮಲ್ ಕ್ರಾಸ್ ನಿಂದ ಸಿಂಧನೂರುವರೆಗಿನ ರಾಜ್ಯ ಹೆದ್ದಾರಿ ಕಾಮಗಾರಿಯು ಈಗಾಗಲೇ ಸುಮಾರು 90% ಪೂರ್ಣಗೊಂಡಿದ್ದು, ಕೇವಲ 10% ಕಾಮಗಾರಿ ಮಾತ್ರ ಬಾಕಿ ಉಳಿದಿರುವ ಈ ಸಂದರ್ಭದಲ್ಲಿ ಮಾನ್ವಿ ಬಂದ್ ಮಾಡುವುದು ಸೂಕ್ತವಲ್ಲ ಎಂದು ಸೈಯದ್ ನಜರುದ್ದೀನ್ ಖಾದ್ರಿ ಗುರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಂದ್‌ನಿಂದ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ರೋಗಿಗಳು ಹಾಗೂ ದಿನನಿತ್ಯ ದುಡಿಯುವ ಕಾರ್ಮಿಕರಿಗೆ ಅನಗತ್ಯ ತೊಂದರೆ ಯಾಗಲಿದೆ. ಆದ್ದರಿಂದ ಬಂದ್ ನಡೆಸುವ ಬದಲು ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರೊಂದಿಗೆ ಸಮಾಲೋಚನೆ ನಡೆಸಿ, ಉಳಿದಿರುವ ಕಾಮಗಾರಿಯನ್ನು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸುವಂತೆ ಒತ್ತಾಯಿಸಬೇಕು ಎಂದು ಅವರು ತಿಳಿಸಿದ್ದಾರೆ.

ಈ ಹಂತದಲ್ಲಿ ರಸ್ತೆ ಕಾಮಗಾರಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗ ಬಾರದು. ಆರಂಭಿಕ ಹಂತದಲ್ಲಿದ್ದಾಗ ಪ್ರತಿಭಟನೆ ನಡೆಸಿದ್ದರೆ ಅರ್ಥ ಪೂರ್ಣವಾಗಿರುತ್ತಿತ್ತು. ಆದರೆ ಈಗ ಕಾಮಗಾರಿ ಅಂತಿಮ ಹಂತದಲ್ಲಿರುವಾಗ ಬಂದ್ ನಡೆಸುವುದರಿಂದ ಈಗಾಗಲೇ ಆಗಿರುವ ಪ್ರಗತಿಗೂ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಮಾನ್ವಿ ಬಂದ್‌ಗೆ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಬೆಂಬಲ ವ್ಯಕ್ತಪಡಿಸಿಲ್ಲ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಬಂದ್ ಮಾಡುವ ಬದಲು ಉಳಿದಿರುವ 10% ಕಾಮಗಾರಿಯನ್ನು ಮುಂದಿನ 1–2 ತಿಂಗಳೊಳಗೆ ಪೂರ್ಣ ಗೊಳಿಸುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಮೇಲೆ ಒತ್ತಡ ಹೇರಿದರೆ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಂ.ಡಿ. ಮಹೆಮೂದ್ ತಿಳಿಸಿದ್ದಾರೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button