ಕುಲ ಸಚಿವರಾಗಿ ಉನ್ನತ ಹುದ್ದೆಗೇರಿದ – ಡಾ, ಅಮರೇಶ ಯತಗಲ್.
ರಾಯಚೂರು ಜು.26

ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಡಾ, ಅಮರೇಶ ಯತಗಲ್ ಅವರನ್ನು ನೇಮಿಸಿ ಆದೇಶಿಸಲಾಗಿದೆ.
ರಾಯಚೂರು ಜಿಲ್ಲೆಯ ಹೆಮ್ಮೆಯ ಸಾಹಿತಿ, ಸಂಶೋಧಕರಾಗಿ ಹೆಸರಾಗಿ ಹಂಪಿಯ ಕನ್ನಡ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾಗಿದ್ದ ಡಾ, ಅಮರೇಶ ಯತಗಲ್ ಅವರಿಗೆ ಹೊಸ ಜವಾಬ್ದಾರಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಕಸಬಾ ಲಿಂಗಸೂಗೂರು ಗ್ರಾಮದವರಾದ ಡಾ, ಅಮರೇಶ ಯತಗಲ್ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕುಲ ಸಚಿವರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಕುಲ ಸಚಿವರಾಗಿರುವ ಡಾ, ಅಮರೇಶ ಯತಗಲ್ ಅವರನ್ನು ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಕುಲ ಸಚಿವರು, ಪ್ರಾಧ್ಯಾಪಕರು ಸಿಬ್ಬಂದಿಗಳು, ಸನ್ಮಾನಿಸಿ ಅಭಿನಂದಿಸಿದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ
