ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನದ ಅಂಗವಾಗಿ & ಸ್ವಾತಂತ್ರ್ಯೋತ್ಸವದ ನಿಮಿತ್ತವಾಗಿ – ವಿವಿಧ ಕ್ಷೇತ್ರದಲ್ಲಿ ಸಾಧನೆ ಹಾಗೂ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಪುರಸ್ಕಾರ & ಪ್ರಶಸ್ತಿ ಸಮಾರಂಭ ಆಯೋಜನೆ.

ವಿಜಯಪುರ ಜು.29

ಆಗಸ್ಟ್ 15 ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣಮ ಜನ್ಮದಿನದ ಅಂಗವಾಗಿ ಮತ್ತು ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಟ್ಟಣದ ಸೋಲಾಪುರ ರಿಂಗ್ ರೋಡ್ ಹತ್ತಿರ ಇರುವ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಪೂಜೆ ಸಲ್ಲಿಸಿ, ನಂತರ ಸಮೀಪದ ಹಾಮುಲಾಲ ದೇವಸ್ಥಾನದ ಆವರಣದಲ್ಲಿ ಶ್ರೀ ರೇವಣಸಿದ್ದೇಶ್ವರ ಸಂಸ್ಥೆ ವಿಜಯಪುರ (ರಿ) ಇವರಿಂದ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ, ಉತ್ಸವವನ್ನು ಆಚರಿಸಲು ಉತ್ಸವ ಸಮೀತಿಯವರು ಹಮ್ಮಿಕೊಂಡಿದ್ದಾರೆ.

ಅಂದು ವಿವಿಧ ಕ್ಷೇತ್ರದಲ್ಲಿ ಸಾಧನೆ ಹಾಗೂ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ಸಮಾರಂಭ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ರಾಯಣ್ಣನ ಅಭಿಮಾನಿಗಳು, ಸಮಾಜದ ಹಿರಿಯರು, ಯುವಕರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉತ್ಸವ ಸಮೀತಿ ಅಧ್ಯಕ್ಷರಾದ ವಾಯ್.ಬಿ ಗುಂಡಕರ್ಜಗಿ ಅವರು ಪ್ರಕಟಣೆಯಲ್ಲಿ ತಿಳಿಸಿದರು.

ಮತ್ತು ಕಾರ್ಯಕ್ರಮದ ನಂತರ ಹಾಮುಲಾಲ‌ ದೇವಸ್ಥಾನದಲ್ಲಿ ಅನ್ನ ಪ್ರಸಾದ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ ಸಂಕನಾಳ ಮುದ್ದೇಬಿಹಾಳ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button