ಶ್ರೀಮಾತೆಯವರ ಮಾತೃ ವಾತ್ಸಲ್ಯ ಅನಂತವಾದದ್ದು – ಶ್ರೀಮತಿ ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಜು.29

ಶ್ರೀಮಾತೆ ಶಾರದಾದೇವಿಯವರ ಮಾತೃವಾತ್ಸಲ್ಯ ಅನಂತವಾದದ್ದು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಶ್ರೀಶಾರದಾದೇವಿ ಜೀವನಗಂಗಾ ಗ್ರಂಥ ಪಾರಾಯಣ ಮಾಡುತ್ತ “ಮಾತೆಯ ಮಡಿಲು” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಜ್ಞಾನಯೋಗದ ಶ್ಲೋಕಗಳ ಕಲಿಕಾ ತರಗತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು.

ಸತ್ಸಂಗದಲ್ಲಿ ಶಾಂತಮ್ಮ, ವಿಜಯಲಕ್ಷ್ಮೀ, ಶೈಲಜಾ, ಕೃಷ್ಣವೇಣಿ, ಸಂಗೀತ, ವೀರಮ್ಮ, ಜಯಮ್ಮ, ಲೀಲಾವತಿ, ಜಯಶೀಲಮ್ಮ, ಶಾರದಮ್ಮ, ಸುಧಾಮಣಿ ಭಾಗವಹಿಸಿದ್ದರು.
