ಗುರು ಪೂರ್ಣಿಮೆಯ ಮಕ್ಕಳಿಗೆ – ಅಕ್ಷರಾಭ್ಯಾಸ ಕಾರ್ಯಕ್ರಮ ಜರಗಿತು.

ಕಾನ ಹೊಸಹಳ್ಳಿ ಜು.31

ಸಮೀಪದ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳೆದರು.

40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ.

ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನ ದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ.

ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿ ಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪ್ರಜೆಗಳನ್ನಾಗಿ ರೂಪಿಸುತ್ತಿದ್ದರು.

ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ.

ಇತ್ತೀಚಿಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ.

ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನ ವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತ ಗೊಳ್ಳಲಿದೆ ಎಂದರು‌.

ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನ ದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತು ಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ.

ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು.

ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿ.ಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.

ಹೋಬಳಿ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button