ನರೇಗಲ್ ಶಾಖೆಯ ಗ್ರಾಮ ವಿದ್ಯುತ್ ಪ್ರತಿನಿಧಿ ಎಂ.ಜಿ ಹಿರೇಮಠ್ – ಅವರಿಗೆ ಭಾವಪೂರ್ಣ ವಿದಾಯ.

ನರೇಗಲ್ ಆ.02

ಕಳೆದ ಹಲವಾರು ವರ್ಷಗಳಿಂದ ನರೇಗಲ್ ಶಾಖೆಯ ಜಕ್ಕಲಿ ಕ್ಯಾಂಪ್‌ನಲ್ಲಿ ಗ್ರಾಮ ವಿದ್ಯುತ್ ಪ್ರತಿ ನಿಧಿಯಾಗಿ ಅವಿರತವಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಎಂ.ಜಿ ಹಿರೇಮಠ್ ಅವರು ಶನಿವಾರ ಸೇವಾ ನಿವೃತ್ತಿ ಹೊಂದಿದರು. ಈ ಹಿನ್ನೆಲೆಯಲ್ಲಿ ನರೇಗಲ್ ಶಾಖಾ ಕಚೇರಿಯಲ್ಲಿ ಅವರಿಗೆ ಆತ್ಮೀಯ ಸನ್ಮಾನ ಮತ್ತು ಭಾವಪೂರ್ಣ ವಿದಾಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಅಧಿಕಾರಿಗಳು ಎಂ.ಜಿ. ಹಿರೇಮಠ್ ಅವರ ಪ್ರಾಮಾಣಿಕತೆ ಮತ್ತು ದಕ್ಷತೆಯನ್ನು ಶ್ಲಾಘಿಸಿದರು. ಹಿರೇಮಠ್ ಅವರು ವಿದ್ಯುತ್ ಇಲಾಖೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಸೇವೆ ಸದಾ ಸ್ಮರಣೀಯ ಎಂದು ಅವರು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ.ಜಿ. ಹಿರೇಮಠ್ ಅವರು ನರೇಗಲ್ ಶಾಖೆಯಲ್ಲಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಈ ಅವಧಿಯಲ್ಲಿ ಸಹೋದ್ಯೋಗಿಗಳು ಮತ್ತು ಸಾರ್ವಜನಿಕರು ನನಗೆ ನೀಡಿದ ಬೆಂಬಲಕ್ಕೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದು ಭಾವುಕರಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ವಿಭಾಗದ ಎಲ್ಲಾ ಹಿರಿಯ ಅಧಿಕಾರಿಗಳು, ನೌಕರರು, ಗ್ರಾಮ ವಿದ್ಯುತ್ ಪ್ರತಿನಿಧಿಗಳು ಹಾಗೂ 24/7 ಸಿಬ್ಬಂದಿಗಳು ಉಪಸ್ಥಿತರಿದ್ದು, ಹಿರೇಮಠ್ ಅವರ ನಿವೃತ್ತ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button