ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಕುರಿತು ಅಬಕಾರಿ ಇಲಾಖೆಯ ಅಧಿಕಾರಿಗಳ ಪರಿಶೀಲನೆ – ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.

ಗೋಮರ್ಸಿ ಆ.05

ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದ ಅಕ್ರಮ ಮದ್ಯ ಮಾರಾಟದ ಕುರಿತು ಅಬಕಾರಿ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿರುವುದು ಸ್ವಾಗತಾರ್ಹ ಬೆಳವಣಿಗೆ ಯಾಗಿದೆ.

ಗ್ರಾಮದ ವಿವಿಧ ಪ್ರದೇಶಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿದ ನಿರುಪಾದಿ ಕೆ ಗೋಮರ್ಸಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಯುವ ಜನತೆ, ಮಹಿಳೆಯರು ಹಾಗೂ ಕುಟುಂಬಗಳ ಸಾಮಾಜಿಕ ಮತ್ತು ಆರ್ಥಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, ಈ ಅಕ್ರಮವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಅತ್ಯಗತ್ಯವಾಗಿದೆ.

ಆದ್ದರಿಂದ ಅಬಕಾರಿ ಇಲಾಖೆ ನಿರಂತರ ದಾಳಿ ನಡೆಸಿ,ಅಕ್ರಮ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಜರುಗಿಸ ಬೇಕು. ಅಧಿಕಾರಿಗಳ ಈ ಪರಿಶೀಲನೆ ಕೇವಲ ಔಪಚಾರಿಕತೆ ಯಾಗದೆ, ಶಾಶ್ವತ ಪರಿಹಾರಕ್ಕೆ ದಾರಿ ಮಾಡಿ ಕೊಡಬೇಕು.

ಗ್ರಾಮದಲ್ಲಿ ಮತ್ತೆ ಅಕ್ರಮ ಮದ್ಯ ಮಾರಾಟ ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಿ, ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಆರೋಗ್ಯಕರ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸುತ್ತೇನೆ.

ಸಾರ್ವಜನಿಕರು ಸಹ ಅಕ್ರಮ ಚಟುವಟಿಕೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿ, ಕಾನೂನು ಪಾಲನೆಗೆ ಸಹಕರಿಸುವಂತೆ ವಿನಂತಿಸುತ್ತೇನೆ ಎಂದು ತಿಳಿಸಿದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button