ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ – ಶಾಸಕ ಬಸನಗೌಡ ದದ್ದಲ ರಾಜೀನಾಮೆ.
ರಾಯಚೂರು ಆ.05


ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ ಬುಧವಾರ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸೋಮವಾರವಷ್ಟೇ ಆಗಿದೆ. ಸಚಿವ ಸ್ಥಾನ ಸಿಗಲಿಲ್ಲವೆಂದು ಹಲವು ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ.
ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕ ದದ್ದಲ ಅವರು ಡಿಕೆಶಿ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸದಲ್ಲಿದ್ದರು.
ಸದ್ಯ, ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, “ಸ್ವ-ಇಚ್ಚೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕೂಡಲೇ ಅಂಗೀಕರಿಸ ಬೇಕಾಗಿ ಕೋರುತ್ತೇನೆ’ ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ
