ಹಸಿರು ಸೇನೆಯ ಯುವ ಘಟಕದ ಅಧ್ಯಕ್ಷರಾಗಿ ಪ್ರಶಾಂತ ಭೂಸನೂರ ಆಯ್ಕೆ.
ಆಲಮೇಲ ಆ.06


ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಿಂದಗಿ ತಾಲೂಕಿನ ಯುವ ಘಟಕದ ನೂತನ ಅಧ್ಯಕ್ಷರಾಗಿ ದೇವಣಗಾಂವ ಗ್ರಾಮದ ಯುವಕ ಪ್ರಶಾಂತ ಶಿವಯೋಗೆಪ್ಪ ಭೂಸನೂರ ರವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಗುರೂಜಿಯವರು ಮತ್ತು ಚೂನ್ನಪ್ಪ ಪೂಜಾರಿ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನೀತಿನ ಮ್ಯಾಕೇರಿ ಮತ್ತು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ರವರ ನೇತೃತ್ವದಲ್ಲಿ ಸಿಂದಗಿ ತಾಲೂಕ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ ಪಾಟೀಲ್, ಕವಿರಾಜ ಲಾಳಸಂಗಿ, ಪ್ರವೀಣ ಭೂಸನೂರ, ಸಂತೋಷ ಪೂಜಾರಿ, ರಘು ಇತರೆ ರೈತ ಮುಖಂಡರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಪ್ಪಯ್ಯ ಹಿರೇಮಠ ಆಲಮೇಲ

