12 ನೇ. ರಾಷ್ಟ್ರೀಯ ಕೈಮಗ್ಗ ದಿನದ – ಹಾರ್ದಿಕ ಶುಭಾಶಯಗಳು.
ಮೊಳಕಾಲ್ಮೂರು ಆ.07


ಪದ್ಮಶಾಲಿ ಕಲ್ಯಾಣ ಮಂಟಪದಲ್ಲಿ ನಡೆದ 12 ನೇ. ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮದಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ಭಾಗವಹಿಸಿ, ಸಾಧನೆ ಮಾಡಿದ ನೇಕಾರರನ್ನು ಸನ್ಮಾನಿಸಿ, ಅಗತ್ಯ ಪರಿಕರಗಳನ್ನು ವಿತರಿಸಿದರು.
ನೇಕಾರರ ಅಭಿವೃದ್ಧಿ ಹಾಗೂ ಅವರ ಜೀವನ ಮಟ್ಟ ಸುಧಾರಣೆಗೆ ಅಗತ್ಯವಿರುವ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರು.
ನಮ್ಮ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಕೊಂಡು ಬರುತ್ತಿರುವ ನೇಕಾರ ಬಂಧುಗಳ ಶ್ರಮಕ್ಕೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ಕೈಮಗ್ಗ ಉಳಿಸಿ ನೇಕಾರರ ಬದುಕು ಬೆಳೆಸಿ. ಎಂದರು ಶಾಸಕರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೆರಿ ಹೊಂಬಾಳೆ ಮೊಳಕಾಲ್ಮುರು
