ದಲಿತರ ಮೇಲಿನ ಸರಣಿ ದೌರ್ಜನ್ಯ ಖಂಡಿಸಿ ಇಂದು ಗದಗದಲ್ಲಿ ಮಾದಿಗ ಮಹಾ ಸಭಾದ ವತಿಯಿಂದ – ಬೃಹತ್ ಪ್ರತಿಭಟನೆ.

ಗದಗ ಆ.10

ರಾಜ್ಯದಲ್ಲಿ ದಲಿತರ ಹಾಗೂ ಶೋಷಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ಭೀಕರ ಹತ್ಯೆ ಅತ್ಯಾಚಾರ ಮತ್ತು ಜಾತೀಯ ನಿಂದನೆಗಳನ್ನು ತೀವ್ರವಾಗಿ ಖಂಡಿಸಿ ಮಾದಿಗ ಮಹಾ ಸಭಾ ಗದಗ ಜಿಲ್ಲಾ ಸಮಿತಿ ವತಿಯಿಂದ ದಿನಾಂಕ:- 10-08-2026 (ಸೋಮವಾರ) ರಂದು ಗದಗ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ದೇವದುರ್ಗ ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಮಾದಿಗ ಸಮುದಾಯದ ಮುಖಂಡ ಶ್ರೀ ಭೂಮಾನಂದ ಹದ್ದಿನಹಾಳ ಜೀಕರ ಅವರ ಭೀಕರ ಹತ್ಯೆಯನ್ನು ಖಂಡಿಸಿ ಕೊಲೆಗಾರರನ್ನು ತಕ್ಷಣ ಬಂಧಿಸಬೇಕು.

ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ದಲಿತ ಬುದ್ಧಿಮಾಂಧ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ದುಷ್ಟಿಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಚನ್ನಗಿರಿ ತಾಲೂಕಿನ ಬೆಳಗೆರೆ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ಮಾಡಿದ್ದರೆಂಬ ಕ್ಷುಲ್ಲಕ ಕಾರಣಕ್ಕೆ 5 ಜನ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಾಕಿ ಭೀಕರವಾಗಿ ತಳಿಸಿ ಜಾತಿನಿಂದನೆ ಮಾಡಿದ ದುಷ್ಟರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.

ದಿನಾಂಕ:-10-08-2026 ಇಂದು (ಸೋಮವಾರ)ಸಮಯ:-ಬೆಳಿಗ್ಗೆ 10:00 ಗಂಟೆಗೆ ಪ್ರತಿಭಟನಾ ಮಾರ್ಗ:- ಗದಗ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಮೆರವಣಿಗೆ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.

ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲು ಕಳಕಳಿಯ ವಿನಂತಿಗದಗ ಜಿಲ್ಲೆಯ ಎಲ್ಲಾ ತಾಲೂಕಗಳ ಮಾದಿಗ ಹಾಗೂ ದಲಿತ-ಬಹುಜನ ಸಮುದಾಯದ ಮುಖಂಡರು, ಸಂಘಟನೆಯ ಪದಾಧಿಕಾರಿಗಳು ಯುವಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೌರ್ಜನ್ಯಕ್ಕೊಳಗಾದ ನೊಂದ ಕುಟುಂಬಗಳಿಗೆ ನ್ಯಾಯ ಸಿಗುವಂತೆ ಈ ಹೋರಾಟವನ್ನು ಯಶಸ್ವಿಗೊಳಿಸ ಬೇಕೆಂದು ಮಾದಿಗ ಮಹಾ ಸಭಾ ಗದಗ ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ ಎಂದು ವರದಿಯಾಗಿದೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button