ಚಿಂತಾಮಣೀಶ್ವರ ಗ್ರಾಮೀಣ ಪ್ರೌಢ ಶಾಲೆಯ ಅಭಿವೃದ್ಧಿಗೆ ಆದ್ಯತೆ ನೀಡಿದ – ಶಾಸಕ ಎನ್.ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು ಆ.12

ವಿಧಾನ ಸಭಾ ಕ್ಷೇತ್ರದ ಹಿರೇಹಳ್ಳಿ ಗ್ರಾಮದ ಚಿಂತಾಮಣೀಶ್ವರ ಗ್ರಾಮೀಣ ಪ್ರೌಢ ಶಾಲೆಗೆ ಇಂದು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಹಾಗೂ ಮೂಲ ಸೌಕರ್ಯ ಅಗತ್ಯತೆಗಳನ್ನು ಒದಗಿಸಲು ನಾನು ಬದ್ಧ ಶಿಕ್ಷಣಕ್ಕೆ ಮೇಲ್ಗೈ ಸಾಧಿಸಲು ನಾನು ಸಿದ್ಧ ಎಂದು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಮನವಿಯನ್ನು ಸ್ವೀಕರಿಸಿದ ಶಾಸಕರು, ಶಾಲೆಯ ಅಗತ್ಯತೆಗಳನ್ನು ಪರಿಶೀಲಿಸಿ ಆದ್ಯತೆಯ ಮೇರೆಗೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ಹಾಗೂ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button