ಬರ ದಿಂದ ಹಾನಿ ಗೊಳಗಾದ ರೈತರ ಜಮೀನುಗಳಿಗೆ – ಶಾಸಕ ಎನ್.ವೈ ಗೋಪಾಲಕೃಷ್ಣ ಭೇಟಿ ಪರಿಶೀಲನೆ.
ಮೊಳಕಾಲ್ಮೂರು ಆ.12

ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎನ್.ವೈ ಗೋಪಾಲಕೃಷ್ಣ ಅವರು, ನೂತನ ಸಚಿವರಾದ ಶ್ರೀ ಟಿ.ರಘುಮೂರ್ತಿ ಅವರೊಂದಿಗೆ ಇಂದು ಮೊಳಕಾಲ್ಮೂರು ತಾಲೂಕಿನ ಹಾನಗಲ್ ಗ್ರಾಮಕ್ಕೆ ಭೇಟಿ ನೀಡಿ, ಪ್ರಕೃತಿ ವಿಕೋಪದಿಂದ ಹಾನಿ ಗೊಳಗಾದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಹಾನಿ ಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಕುರಿತು ಪರಿಶೀಲನೆ ನಡೆಸಿ, ರೈತರ ಅಹವಾಲುಗಳನ್ನು ಆಲಿಸಿದರು. ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಂಡರು.
ಪ್ರಕೃತಿ ವಿಕೋಪದಿಂದ ಉಂಟಾಗಿರುವ ಹಾನಿಯ ಸಮಗ್ರ ವರದಿ ಸಿದ್ಧ ಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಸಂಕಷ್ಟದಲ್ಲಿರುವ ಅರ್ಹ ರೈತರಿಗೆ ಸೂಕ್ತ ಪರಿಹಾರವನ್ನು ತ್ವರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ನಂತರ ನಡೆದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಾನಿಯ ಪ್ರಮಾಣ, ಕೈಗೊಂಡಿರುವ ಪರಿಹಾರ ಕಾರ್ಯಗಳು ಹಾಗೂ ಮುಂದಿನ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಎಂ.ಕೆ. ತಾಜ್ ಪೀರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ, ಆಕಾಶ್, ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ್ ಬಂಡಾರು, ಮೊಳಕಾಲ್ಮೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಖಲೀಂ ಉಲ್ಲಾ, ತಳಕು–ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ನಾಗೇಶ್ ರೆಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀ ಮಂಜುನಾಥ್ ಸೇರಿದಂತೆ ಪ್ರಮುಖ ಜನ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೆರಿ ಹೊಂಬಾಳೆ ಮೊಳಕಾಲ್ಮುರು

