ನಶೆ ಮುಕ್ತ ಭಾರತಕ್ಕೆ ಕೈ ಜೋಡಿಸಿರಿ ಎಂದು – ರೇಣುಕಾ ಅಕ್ಕ ಅವರು ಕರೆ ನೀಡಿದರು.
ಆಲಮೇಲ ಆ.13

ಯುವ ಜನತೆ ಹಾಗೂ ವಿದ್ಯಾರ್ಥಿಗಳು ನಶೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿ, ನಶೆ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸ ಬೇಕು ಎಂದು ಆಲಮೇಲದ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಕುಮಾರಿ ರೇಣುಕಾ ಅಕ್ಕ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಆಲಮೇಲ ತಾಲ್ಲೂಕಿನ ಮೋರಟಗಿಯ ಕಲ್ಪವೃಕ್ಷ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ‘ನಶೆ ಮುಕ್ತರಾಗುವ ಪ್ರತಿಜ್ಞಾ ಮಹಾ ಅಭಿಯಾನ’ದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರು ದೇಶದ ಯುವ ಚೇತನ ಶಕ್ತಿಯಾಗಿದ್ದಾರೆ. ಭವ್ಯ ಭಾರತದ ಭವಿಷ್ಯ ಯುವಕರು ಹಾಗೂ ವಿದ್ಯಾರ್ಥಿಗಳ ಮೇಲಿದೆ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯಕರ ಜೀವನ, ಕುಟುಂಬದ ಕಲ್ಯಾಣ ಹಾಗೂ ಉಜ್ವಲ ಭವಿಷ್ಯಕ್ಕಾಗಿ ನಮ್ಮ ದೇಶವನ್ನು ನಶೆ ಮುಕ್ತ ಭಾರತವನ್ನಾಗಿ ಮಾಡುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಮಾರು 600 ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಶರಣಗೌಡ ವಿ. ಬಿರಾದಾರ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸೇವಕರಾದ ರಂಗಪ್ಪ ಹೊಸಕೋಟಿ, ಗಾಲಿಬ್ ಸಾಹೇಬ, ಪಾರ್ವತಿ ಹೊಸಮನಿ, ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಭಾರತಿ ಚಿಕ್ಕಲಗಿ, ಹಿರಿಯ ಉಪನ್ಯಾಸಕ ಸಿ.ಸಿ. ಬಿರಾದಾರ ಉಪಸ್ಥಿತರಿದ್ದರು. ಎಸ್.ಎಸ್. ನಿಗಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ ಹಿರೇಮಠ ಆಲಮೇಲ

