ಸಾರ್ವಜನಿಕ ಸೇವೆ ಗುರುತಿಸಿ ಪತ್ರಕರ್ತ ಪ್ರದೀಪ್.ಹೆಚ್ ಈ – ರವರಿಗೆ ಸನ್ಮಾನ.

ತರೀಕೆರೆ ಆ8.15

ತಾಲ್ಲೂಕ ಆಡಳಿತ, ತಾಲ್ಲೂಕ ಪಂಚಾಯಿತಿ ಹಾಗೂ ಪುರಸಭೆ, ತರೀಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ 80 ನೇ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪತ್ರಕರ್ತ ಪ್ರದೀಪ್.ಹೆಚ್ ಈ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಎನ್‌.ಕೆ.ಎಸ್ ಟಿ.ವಿ4 ಹಾಗೂ ಪ್ರಜಾ ಪವರ್ ಟಿವಿ ಚಾನಲ್‌ಗಳ ಚಿಕ್ಕಮಗಳೂರು ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಪ್ರದೀಪ್.ಹೆಚ್ ಈ ಅವರು ತರೀಕೆರೆ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಸಾರ್ವಜನಿಕ ಸಮಸ್ಯೆಗಳು, ಸ್ಥಳೀಯ ಅಭಿವೃದ್ಧಿ ಕಾರ್ಯಗಳು, ಸರ್ಕಾರಿ ಯೋಜನೆಗಳು ಮತ್ತು ಕಾರ್ಯಕ್ರಮಗಳು, ಶಿಕ್ಷಣ, ಕೃಷಿ, ಆರೋಗ್ಯ, ಸಾಮಾಜಿಕ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳನ್ನು ನಿರಂತರವಾಗಿ ವರದಿ ಮಾಡುತ್ತಿದ್ದಾರೆ.

ಸಾಮಾನ್ಯ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ನೀರು, ವಿದ್ಯುತ್, ಮೂಲ ಸೌಕರ್ಯ, ಶಿಕ್ಷಣ ಹಾಗೂ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಹಾಗೂ ಜನ ಪ್ರತಿನಿಧಿಗಳ ಗಮನಕ್ಕೆ ತರುವ ಮೂಲಕ ಪರಿಹಾರಕ್ಕೆ ಒತ್ತು ನೀಡುತ್ತಿರುವುದು ಗಮನಾರ್ಹವಾಗಿದೆ.

ಅದೇ ರೀತಿ, ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ತಲುಪಿಸುವುದು, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಅರಿವು ಮೂಡಿಸುವುದು ಹಾಗೂ ಸ್ಥಳೀಯವಾಗಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಾಸ್ತವಾಂಶಾಧಾರಿತ ವರದಿಗಳ ಮೂಲಕ ಜನರಿಗೆ ಮಾಹಿತಿ ಒದಗಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ನೀಡುವ ಮಾಧ್ಯಮವಾಗಿರದೆ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ, ಜನರ ಧ್ವನಿಯನ್ನು ಆಡಳಿತ ವ್ಯವಸ್ಥೆಗೆ ತಲುಪಿಸುವ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ.

ಈ ದಿಟ್ಟ ಪ್ರದಿಪ್.ಹೆಚ್ ಈ ಅವರು ತಮ್ಮ ಪತ್ರಿಕೋದ್ಯಮ ಸೇವೆಯ ಮೂಲಕ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡುತ್ತಿರುವುದನ್ನು ಪರಿಗಣಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸಾರ್ವಜನಿಕ ಸೇವೆ, ಸಾಮಾಜಿಕ ಕಳಕಳಿ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ನೀಡಿರುವ ಈ ಗೌರವವು ಪ್ರದೀಪ್.ಹೆಚ್ ಈ ಅವರಿಗೆ ಮತ್ತಷ್ಟು ಉತ್ಸಾಹ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಪ್ರೇರಣೆಯಾಗಿದೆ.

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಯೂ ಸುದ್ದಿ ಯಾಗಬೇಕು, ಸಂಬಂಧಿಸಿದವರ ಗಮನಕ್ಕೆ ತಲುಪಬೇಕು ಮತ್ತು ಸಾಧ್ಯವಾದಷ್ಟು ಪರಿಹಾರ ದೊರೆಯಬೇಕು ಎಂಬ ಆಶಯದೊಂದಿಗೆ ಪತ್ರಿಕೋದ್ಯಮ ಸೇವೆಯನ್ನು ಮುಂದುವರಿಸುವುದಾಗಿ ಪ್ರದೀಪ್.ಹೆಚ್ ಈ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಜಿಲ್ಲಾ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್ ವೆಂಕಟೇಶ್ ತರೀಕೆರೆ ಚಿಕ್ಕಮಗಳೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Check Also
Close
Back to top button