ಸ್ವಾತಂತ್ರ್ಯದ ಸಂಭ್ರಮದಲ್ಲಿ ಕೂಡ್ಲಿಗಿ ಅಭಿವೃದ್ಧಿಯ ಪತಾಕೆ – ಮೂರು ವರ್ಷದ ಸಾಧನೆಗಳ ಅನಾವರಣ..!
ಕೂಡ್ಲಿಗಿ ಆ.16



ತಾಲೂಕ ಆಡಳಿತದ ವತಿಯಿಂದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಶನಿವಾರ ನಡೆದ 80 ನೇ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ, ಶ್ರೀನಿವಾಸ್ ಎನ್.ಟಿ ಅವರು ಧ್ವಜಾರೋಹಣ ನೆರವೇರಿಸಿ, ಕ್ಷೇತ್ರದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ತಮ್ಮ ಮೂರು ವರ್ಷದ ಆಡಳಿತಾವಧಿಯ ಪ್ರಮುಖ ಸಾಧನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಚಿತ್ರಣವನ್ನು ಜನರ ಮುಂದಿಟ್ಟರು. ನಿಕಟ ಪೂರ್ವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ಈಗಿನ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಬಸವಂತಪ್ಪ ಅವರ ಸಹಕಾರವನ್ನು ಸ್ಮರಿಸಿದರು.
ಪಂಚ ಗ್ಯಾರಂಟಿ ಯೋಜನೆಗಳು, ಹೊಸಳ್ಳಿ ಪೊಲೀಸ್ ಠಾಣಾ ವೃತ್ತವನ್ನು ಕೂಡ್ಲಿಗಿ ವೃತ್ತಕ್ಕೆ ಸೇರ್ಪಡೆ, ವಿದ್ಯುತ್ ಉಪ ವಿಭಾಗ ಕಚೇರಿಯನ್ನು ಹೊಸಪೇಟೆಗೆ ಸ್ಥಳಾಂತರ, 100 ಕಂದಾಯ ಗ್ರಾಮಗಳ ಘೋಷಣೆ ಹಾಗೂ ಹಕ್ಕುಪತ್ರ ವಿತರಣೆ ಕ್ಷೇತ್ರದ ಪ್ರಮುಖ ಆಡಳಿತಾತ್ಮಕ ಸಾಧನೆಗಳಾಗಿವೆ ಎಂದರು.
ಕಲ್ಯಾಣ ಕರ್ನಾಟಕ ಅನುದಾನದಡಿ 400 ಬಸ್‌ಗಳ ಖರೀದಿಗೆ ಅನುಮೋದನೆ ದೊರೆತಿದ್ದು, ಇದರಿಂದ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ತಾಲೂಕಿನ ಬಡಜನರ ಗುಳೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸ್ಥಳೀಯವಾಗಿ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಸದನದಲ್ಲಿ ಧ್ವನಿ ಎತ್ತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಶಾಸಕರು, ಕ್ಷೇತ್ರದ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಸಂವಿಧಾನ ಮತ್ತು ಕಾನೂನುಗಳನ್ನು ಗೌರವಿಸಿ, ಪರಿಸರ ಸಂರಕ್ಷಣೆ, ದೇಶ ಪ್ರೇಮ, ಶಾಂತಿ, ಶಿಸ್ತು ಹಾಗೂ ಏಕತೆಯನ್ನು ಕಾಪಾಡಿ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ನಿರ್ಮಿಸೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ವಿ.ಕೆ. ನೇತ್ರಾವತಿ, ಮಾತನಾಡಿದರು ಹಾಗೂ ಎಲ್ಲಾ ಇಲಾಖೆಯ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು ಹಾಗೂ ಅಂಗವಿಕಲರಿಗೆ ಸನ್ಮಾನಿಸಲಾಯಿತು ಹಾಗೂ ಮಾಜಿ ಸೈನಿಕರಿಗೂ ಹಾಗೂ ಹಾಲಿ ಸೈನಿಕರು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು ಹಾಗೂ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಬಿ.ಇ.ಓ ಮೈಲೇಶ್ ಬೇವೂರ್, ಡಿ.ವೈ.ಎಸ್ಪಿ ಮಲ್ಲೇಶಪ್ಪ ದೊಡ್ಡಮನಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ಶ್ರೀ ಜಿಲಾನ್ ಭಾಷಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಗುರುಸಿದ್ದನಗೌಡ್ರು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀ ದಾದಾಪೀರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್ ಹಾಗೂ ಸಾರ್ವಜನಿಕರು ಹಲವಾರು ಮುಖಂಡರಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಶಿಸ್ವಾಮಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು ಕಾವಲಿ ಶಿವಪ್ಪ ನಾಯಕ, ಗುಂಡಮಾನಗು ತಿಪ್ಪೇಸ್ವಾಮಿ ಬಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ .ಮಾದಿಹಳ್ಳಿ ನಜೀರ್ ಸಾಬ್, ಕೊಗಳಿ ಮಂಜಣ್ಣ, ಹಿರೇಕುಂಬಳಗುಂಟೆ ಉಮೇಶ್, ಉದಯಜನ್ನು ಹಾಗೂ ಜಯರಾಮ ಸೇರಿದಂತೆ ವಿವಿಧ ಮುಖಂಡರು, ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹೋಬಳಿ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್ ವೀರೇಶ್ ಕೆ.ಹೊಸಹಳ್ಳಿ

