ಅಧಿಕಾರವಲ್ಲ ಅಭಿವೃದ್ಧಿಯೇ ರಾಜಕಾರಣದ ಗುರಿ, ಕೂಡ್ಲಿಗಿಯಲ್ಲಿ ಸಚಿವ – ಶಾಸಕರ ಮಹತ್ವದ ಸಮಾಲೋಚನೆ.
ಕೂಡ್ಲಿಗಿ ಆ.16



80 ನೇ. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಸಂದರ್ಭದಲ್ಲಿ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ “ಶ್ರೀ ಕೆ.ಎಸ್. ಬಸವಂತಪ್ಪ” ಅವರಿಗೆ ಕೂಡ್ಲಿಗಿ ಪಟ್ಟಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.
ಪಟ್ಟಣದ ವಿವಿಧ ಭಾಗಗಳಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಕೂಡ್ಲಿಗಿಯ “ಮಹನೀಯರ ವೃತ್ತಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಿನ ಗಣ್ಯ ಮಹನೀಯರಿಗೆ ಗೌರವ ಸಮರ್ಪಿಸಲಾಯಿತು”.
ಈ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ಸಾರ್ವಜನಿಕರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.ನಂತರ ಸಚಿವರು, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ, ಶ್ರೀನಿವಾಸ್ ಎನ್.ಟಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಸೌಹಾರ್ದಯುತವಾಗಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರು ಸಚಿವರನ್ನು ಆತ್ಮೀಯವಾಗಿ ಬರಮಾಡಿ ಕೊಂಡು, ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಮೂಲ ಸೌಕರ್ಯಗಳ ಅಭಿವೃದ್ಧಿ, ಜನಪರ ಯೋಜನೆಗಳ ಅನುಷ್ಠಾನ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳ ಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.
ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಹಾಗೂ ಕೂಡ್ಲಿಗಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಸಹಕಾರ ಮತ್ತು ಅನುದಾನ ದೊರೆಯಬೇಕು ಎಂಬ ಕುರಿತು ಮಹತ್ವದ ವಿಚಾರ ವಿನಿಮಯ ನಡೆಯಿತು.
ಈ ಸಂದರ್ಭದಲ್ಲಿ ಬಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಗುಂಡುಮಣಗು ತಿಪ್ಪೇಸ್ವಾಮಿ, ಗುರುಸಿದ್ದನಗೌಡ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಎಸ್‌ಟಿ ಜಿಲ್ಲಾಧ್ಯಕ್ಷರಾದ ಕಾವಲಿ ಶಿವಪ್ಪ ನಾಯಕ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಶಿಧರ ಸ್ವಾಮಿ, ನಾಗರಕಟ್ಟೆ ರಾಜಣ್ಣ, ಕರವೇ ಅಧ್ಯಕ್ಷರಾದ ಕಾಟೇರ ಹಾಲೇಶ್, ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರಾದ ಪ್ರಭಾಕರ್ ಸೇರಿದಂತೆ ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್ ವೀರೇಶ್ ಕೆ.ಹೊಸಹಳ್ಳಿ

