ಸಮಾಜ ಮುಖಿ ಕಾರ್ಯಗಳೊಂದಿಗೆ ರಾಜಾ ವೆಂಕಟಪ್ಪ ನಾಯಕ ಹುಟ್ಟು ಹಬ್ಬದ ನಿಮಿತ್ಯವಾಗಿ – ರೋಗಿಗಳಿಗೆ ಹಣ್ಣು ಹಂಪಲು ಅನಾಥಾಶ್ರಮ, ಅಂಧ ಮಕ್ಕಳ ಶಾಲೆಯಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು.

ಮಾನ್ವಿ ಆ.20

ವಿಧಾನ ಸಭಾ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಹುಟ್ಟುಹಬ್ಬವನ್ನು ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.

ಹುಟ್ಟು ಹಬ್ಬದ ಪ್ರಯುಕ್ತ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಳಿಕ ನೆರಳು ಅನಾಥಾಶ್ರಮ ಹಾಗೂ ಶ್ರೀ ಚನ್ನಬಸವೇಶ್ವರ ಅಂಧ ಮಕ್ಕಳ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು.

ನಂತರ ನಿವಾಸದಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಹುಟ್ಟು ಹಬ್ಬದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜಾ ವೆಂಕಟಪ್ಪ ನಾಯಕ, ಕಳೆದ ಮೂರು ವರ್ಷಗಳಿಂದ ಹುಟ್ಟು ಹಬ್ಬವನ್ನು ಆಚರಿಸಿ ಕೊಂಡಿರಲಿಲ್ಲ. ಆದರೆ ಈ ಬಾರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಸರಳವಾಗಿ ಹುಟ್ಟು ಹಬ್ಬ ಆಚರಿಸಲಾಗುತ್ತಿದೆ ಎಂದು ಹೇಳಿದರು.

ತಾವು ಶಾಸಕರಾಗಿದ್ದ ಅವಧಿಯಲ್ಲಿ ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದ ಅವರು, ಜನರ ಆಶೀರ್ವಾದ ಹಾಗೂ ಕಾರ್ಯಕರ್ತರ ಬೆಂಬಲದೊಂದಿಗೆ 2028 ರಲ್ಲಿ ಮತ್ತೆ ಶಾಸಕರಾಗುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ನಗರ ಘಟಕದ ಅಧ್ಯಕ್ಷ ಎಚ್. ಮೌನೇಶ್ ಗೌಡ, ರೈತ ಘಟಕದ ಅಧ್ಯಕ್ಷ ಶರಣಪ್ಪಗೌಡ ಮದ್ಲಾಪುರ್, ಮುಖಂಡರಾದ ಬಾಷಸಾಬ್, ಶರಣಪ್ಪ ಮೇದಾ, ನಾಗರಾಜ್ ಬೋಗಾವತಿ, ರಾಜಾ ಆದರ್ಶ ನಾಯಕ, ಜಿ. ಲೋಕರೆಡ್ಡಿ, ಪಿ. ರವಿಕುಮಾರ್, ವಿಜಯಲಕ್ಷ್ಮೀ, ಸರ್ವಮಂಗಳ, ಎಂ.ಡಿ. ಉಸ್ಮಾನ್, ಮೌಲಸಾಬ್, ಸುಬಾನ್ ಬೇಗ್, ಶ್ರೀಧರ್ ಸ್ವಾಮಿ, ದಾನಪ್ಪ, ಸೂಗುರೇಶ ಹಿರೇಮಠ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button