ಸಕಲ ಜೀವಿಗಳ ಮೇಲಣ ಶಾರದಾ ಮಾತೆಯವರ ಮಾತೃ ವಾತ್ಸಲ್ಯ ಅಗಾಧವಾದದ್ದು – ಜಿ.ಯಶೋಧಾ ಪ್ರಕಾಶ್.

ಚಳ್ಳಕೆರೆ ಆ.20

ಶ್ರೀಮದ್ ಭಗವದ್ಗೀತೆಯ ಜ್ಞಾನ ಯೋಗದ ಶ್ಲೋಕಗಳ ಕಲಿಕಾ ತರಗತಿ…..

ಜಗತ್ತಿನ ಸಕಲ ಪ್ರಾಣಿ-ಪಕ್ಷಿಗಳಿಂದ ಹಿಡಿದು ಮನುಷ್ಯನ ವರೆಗೆ ಶ್ರೀಮಾತೆ ಶಾರದಾ ದೇವಿಯವರು ಹರಿಸುತ್ತಿದ್ದ ಮಾತೃ ವಾತ್ಸಲ್ಯ ಅನಂತವಾದದ್ದು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ‌.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮಾತೆಯ ಮಡಿಲು” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಆರಂಭದಲ್ಲಿ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಜ್ಞಾನಯೋಗದ ಶ್ಲೋಕಗಳ ಕಲಿಕಾ ತರಗತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ಸುಧಾಮಣಿ, ಶೈಲಜಾ, ರಶ್ಮಿ, ಕವಿತಾ, ಗೀತಾಲಕ್ಷ್ಮೀ, ಶಾರದಮ್ಮ, ನಾಗರತ್ನಮ್ಮ, ಭಾಗ್ಯಲಕ್ಷ್ಮೀ, ವಿಜಯಲಕ್ಷ್ಮೀ, ಭ್ರಮರಂಬಾ ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button