ಉತ್ತಮ ಮಳೆ, ಸಮೃದ್ಧ ಬೆಳೆಗಾಗಿ ಮಹಾ ಲಕ್ಷ್ಮಿ ದೇವಿಗೆ – ವಿಶೇಷ ಪೂಜೆ ಜರುಗಿತು.

ದೇವಣಗಾಂವ ಆ.24

ಆಲಮೇಲ ತಾಲೂಕಿನ ಉತ್ತಮ ಮಳೆಯಾಗಿ ರೈತರ ಬೆಳೆಗಳು ಸಮೃದ್ಧವಾಗಿ ಬೆಳೆಯಲಿ, ಗ್ರಾಮದಲ್ಲಿ ಸಂತೋಷ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ ಎಂಬ ಆಶಯದೊಂದಿಗೆ ಆಲಮೇಲ್ ತಾಲೂಕಿನ ದೇವಣಗಾಂವ ಗ್ರಾಮದಲ್ಲಿರುವ ಊರಿನ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗ್ರಾಮದ ಮಹಿಳೆಯರು ಹಾಗೂ ಹೆಣ್ಣುಮಕ್ಕಳು ಭಕ್ತಿಭಾವದಿಂದ ದೇವಸ್ಥಾನಕ್ಕೆ ಆಗಮಿಸಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಳೆರಾಯ ಕೃಪೆ ತೋರಿ, ಉತ್ತಮ ಮಳೆಯಾಗಬೇಕು. ಕೆರೆ, ಹಳ್ಳ, ಬಾವಿ ಸೇರಿದಂತೆ ಜಲ ಮೂಲಗಳು ನೀರಿನಿಂದ ತುಂಬ ಬೇಕು. ರೈತರು ಬಿತ್ತನೆ ಮಾಡಿರುವ ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ಮಳೆ ದೊರೆತು ಉತ್ತಮ ಇಳುವರಿ ಬರಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಹಿಳೆಯರು ಒಗ್ಗಟ್ಟಿನಿಂದ ನೀರು ಹಾಕುವ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ನೆರವೇರಿಸಿದರು. ಮಹಾಲಕ್ಷ್ಮಿ ದೇವಿಯ ಸನ್ನಿಧಿಯಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಿ, ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಿದರು. ಗ್ರಾಮಸ್ಥರ ಮನೆ-ಮನೆಗಳಲ್ಲಿ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು.

ದೇವಣಗಾಂವ ಗ್ರಾಮವು ಕೃಷಿ ಪ್ರಧಾನ ಗ್ರಾಮ ವಾಗಿರುವುದರಿಂದ ರೈತರ ಬದುಕು ಉತ್ತಮ ಮಳೆಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಅವಲಂಬಿತವಾಗಿದೆ. ಉತ್ತಮ ಮಳೆಯಾದರೆ ಬೆಳೆಗಳು ಸಮೃದ್ಧವಾಗಿ ಬೆಳೆಯುವುದರ ಜೊತೆಗೆ ರೈತರ ಕುಟುಂಬಗಳ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ.

ಈ ಹಿನ್ನೆಲೆಯಲ್ಲಿ ಮಳೆಗಾಗಿ ದೇವರ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿರುವುದು ಗ್ರಾಮಸ್ಥರಲ್ಲಿ ಭಕ್ತಿ ಭಾವ ಹಾಗೂ ಒಗ್ಗಟ್ಟಿನ ಮನೋಭಾವವನ್ನು ಮೂಡಿಸಿದೆ.ಕಾರ್ಯಕ್ರಮದಲ್ಲಿ ಗ್ರಾಮದ ಮಹಿಳೆಯರು, ಹಿರಿಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಹಾಲಕ್ಷ್ಮಿ ದೇವಿಯ ಆಶೀರ್ವಾದ ಪಡೆದರು.

“ಮಳೆರಾಯ ಕೃಪೆ ತೋರಿ, ರೈತರ ಹೊಲಗಳಲ್ಲಿ ಹಸಿರು ಸಮೃದ್ಧಿ ಕಾಣಿಸಲಿ, ಅನ್ನದಾತರ ಬದುಕು ಹಸನಾಗಲಿ” ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಭಕ್ತಿ ಪೂರ್ವಕವಾಗಿ ನೆರವೇರಿಸಲಾಯಿತು.

ಈ ವಿಶೇಷ ಕಾರ್ಯಕ್ರಮವು ಗ್ರಾಮದಲ್ಲಿ ಧಾರ್ಮಿಕ ಭಕ್ತಿ, ಮಹಿಳೆಯರ ಒಗ್ಗಟ್ಟು ಹಾಗೂ ರೈತರ ಮೇಲಿನ ಕಾಳಜಿಗೆ ಸಾಕ್ಷಿಯಾಯಿತು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಗಾಲಿಬಸಾಹೇಬ್ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button