ಘಟಪ್ರಭಾದಲ್ಲಿ ಡಾ, ನಾರಾಯಣ ಸುಬ್ಬರಾವ್ ಹರ್ಡೀಕರ್ ಅವರ – 51 ನೇ. ಪುಣ್ಯ ತಿಥಿ ಆಚರಣೆ ಆಯೋಜನೆ.

ದೇವಣಗಾಂವ ಆ.25

ಘಟಪ್ರಭಾ, ಆ. 24 ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸೇವಾ ದಳದ ಸ್ಥಾಪಕರಾದ ಡಾ, ನಾರಾಯಣ ಸುಬ್ಬರಾವ್ ಹರ್ಡೀಕರ್ ಅವರ 51 ನೇ. ಪುಣ್ಯ ತಿಥಿಯನ್ನು ಆಗಸ್ಟ್ 26 ರಂದು ಘಟಪ್ರಭಾದಲ್ಲಿ ಗೌರವ ಪೂರ್ವಕವಾಗಿ ಆಚರಿಸಲಾಗುವುದು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಡಾ. ಹರ್ಡೀಕರ್ ಅವರು ಸೇವಾ ಮನೋಭಾವ, ಶಿಸ್ತು, ರಾಷ್ಟ್ರೀಯ ಪ್ರಜ್ಞೆ ಹಾಗೂ ಸಮಾಜ ಮುಖಿ ಕಾರ್ಯಗಳಿಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. 1923 ರಲ್ಲಿ ಸೇವಾ ದಳದ ಸಂಘಟನೆಯನ್ನು ರೂಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯಾನಂತರವೂ ಸಮಾಜ ಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾಗಿದೆ. ಘಟಪ್ರಭಾದ ಕರ್ನಾಟಕ ಆರೋಗ್ಯ ಸಂಸ್ಥೆಯ ಸ್ಥಾಪನೆಯಲ್ಲಿಯೂ ಅವರ ಕೊಡುಗೆ ಇತ್ತು.

ಈ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ಘಟಪ್ರಭಾದಲ್ಲಿ ನಡೆಯಲಿರುವ 51ನೇ ಪುಣ್ಯತಿಥಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಸದಸ್ಯರು ಹಾಗೂ ಎಲ್ಲ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾಂಗ್ರೆಸ್ ಸೇವಾದಳ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಾಲಿಬಸಾಹೇಬ ನಾಗಾವಿ ಅವರು ಮನವಿ ಮಾಡಿದ್ದಾರೆ.

ಡಾ, ಹರ್ಡೀಕರ್ ಅವರ ತ್ಯಾಗ, ದೇಶಪ್ರೇಮ, ಸೇವಾ ಮನೋಭಾವ ಮತ್ತು ಆದರ್ಶಗಳನ್ನು ಸ್ಮರಿಸುವ ಮೂಲಕ ಅವರ ಚಿಂತನೆಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

“ಹರ್ಡೀಕರ್ ಅವರ ಆದರ್ಶಗಳು ಮತ್ತು ಸೇವಾ ಮನೋಭಾವವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಅವರ ಪುಣ್ಯ ಸ್ಮರಣೆಯಲ್ಲಿ ಎಲ್ಲರೂ ಭಾಗವಹಿಸಿ ಗೌರವ ಸಲ್ಲಿಸಬೇಕು” ಎಂದು ಗಾಲಿಬಸಾಹೇಬ ನಾಗಾವಿ ತಿಳಿಸಿದ್ದಾರೆ. ಸ್ಥಳ:ಘಟಪ್ರಭಾ ದಿನಾಂಕ: 26/08/2026 ಮನವಿ.

ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಹಾಗೂ ಎಲ್ಲಾ ಕಾರ್ಯಕರ್ತರು ತಪ್ಪದೇ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸ ಬೇಕಾಗಿ ಕಾಂಗ್ರೆಸ್ ಸೇವಾದಳ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಾಲಿಬಸಾಹೇಬ ನಾಗಾವಿ ಅವರು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾರ್ಯಕ್ರಮ ಜರುಗುವುದು ಎಂದು ಕೋರಿದ್ದಾರೆ.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಗಾಲಿಬಸಾಹೇಬ್ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button