ಭೀಮಾ ನದಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿ ಪೂರ್ಣ ಆಗಸ್ಟ್ 30 ರಂದು – ಶಾಸಕ ಅಶೋಕ್ ಮನಗೂಳಿ ಅವರ ನೇತೃತ್ವದಲ್ಲಿ ಉದ್ಘಾಟನೆ ಕಾರ್ಯ ಜರುಗುವುದು.

ದೇವಣಗಾಂವ ಆ.26

ಆಲಮೆಲ ತಾಲೂಕಿನ ದೇವಣಗಾಂವ ಗ್ರಾಮದ ಜನರ ಬಹು ದಿನಗಳ ನಿರೀಕ್ಷೆಗೆ ಇದೀಗ ತೆರೆ ಬೀಳುವಂತಾಗಿದೆ. ಗ್ರಾಮದ ಜನರ ಸಂಚಾರಕ್ಕೆ ಪ್ರಮುಖ ಸಂಪರ್ಕ ಕೊಂಡಿ ಯಾಗಿರುವ ಭೀಮಾ ನದಿ ಸೇತುವೆಯ ಪುನರ್ ನಿರ್ಮಾಣ ಕಾಮಗಾರಿ ಪೂರ್ಣ ಗೊಂಡಿದ್ದು, 30 ಆಗಸ್ಟ್ 2026 ರಂದು ನೂತನ ಸೇತುವೆಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸನ್ಮಾನ್ಯ ಶಾಸಕರಾದ ಶ್ರೀ ಅಶೋಕ್ ಮನಗೂಳಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಉದ್ಘಾಟನಾ ಕಾರ್ಯಕ್ರಮವು ದೇವಣಗಾಂವ್ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳ ಜನರಲ್ಲಿ ಸಂತಸ ಮೂಡಿಸಿದೆ.

ಭೀಮಾ ನದಿಗೆ ನಿರ್ಮಿಸಲಾದ ಈ ಸೇತುವೆ ಗ್ರಾಮಸ್ಥರ ದೈನಂದಿನ ಸಂಚಾರ, ರೈತರ ಕೃಷಿ ಚಟುವಟಿಕೆಗಳು, ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಂಚಾರ ಹಾಗೂ ವ್ಯಾಪಾರ-ವಹಿವಾಟಿಗೆ ಅತ್ಯಂತ ಮಹತ್ವದ್ದಾಗಿದೆ.

ಸೇತುವೆಯ ಪುನರ್ ನಿರ್ಮಾಣದಿಂದ ಮಳೆಗಾಲ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಜನರು ಎದುರಿಸುತ್ತಿದ್ದ ಸಂಚಾರದ ತೊಂದರೆಗಳು ಕಡಿಮೆಯಾಗಲಿದ್ದು, ಗ್ರಾಮಗಳ ನಡುವಿನ ಸಂಪರ್ಕ ಮತ್ತಷ್ಟು ಸುಗಮವಾಗಲಿದೆ ಎಂಬ ನಿರೀಕ್ಷೆ ಮೂಡಿದೆ.

ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವ ಶಾಸಕ ಅಶೋಕ್ ಮನಗೂಳಿ ದೇವಣಗಾಂವ ಭೀಮಾ ನದಿ ಸೇತುವೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಆದ್ಯತೆ ನೀಡಿ, ಜನರ ಸಮಸ್ಯೆಗೆ ಸ್ಪಂದಿಸಿರುವ ಶಾಸಕ ಅಶೋಕ್ ಮನಗೂಳಿ ಅವರ ಕಾರ್ಯವೈಖರಿಗೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಜನರ ಅಗತ್ಯಗಳನ್ನು ಗುರುತಿಸಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಅವರ ಜನಪರ ಕಾರ್ಯದ ಒಂದು ಉದಾಹರಣೆಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಸೇತುವೆ ನಿರ್ಮಾಣದಿಂದ ಕೇವಲ ದೇವಣಗಾಂವ ಗ್ರಾಮಕ್ಕೆ ಮಾತ್ರವಲ್ಲದೆ ಸುತ್ತಮುತ್ತಲಿನ ಹಲವು ಗ್ರಾಮಗಳ ಜನರಿಗೂ ಅನುಕೂಲವಾಗಲಿದೆ. ಜನರ ಸುರಕ್ಷತೆ, ಸುಗಮ ಸಂಚಾರ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಇಂತಹ ಮೂಲ ಸೌಕರ್ಯಗಳು ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸೇತುವೆ ಪುನರ್ ನಿರ್ಮಾಣವು ಮಹತ್ವದ ಹೆಜ್ಜೆಯಾಗಿದೆ.

“ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದೇ ನಿಜವಾದ ಜನಸೇವೆ” ಎಂಬ ಆಶಯಕ್ಕೆ ಅನುಗುಣವಾಗಿ ಶಾಸಕರ ನೇತೃತ್ವದಲ್ಲಿ ನಡೆದಿರುವ ಈ ಅಭಿವೃದ್ಧಿ ಕಾರ್ಯಕ್ಕೆ ಸಾರ್ವಜನಿಕರಿಂದ ಅಭಿನಂದನೆಗಳು ವ್ಯಕ್ತವಾಗುತ್ತಿವೆ.

ಆಗಸ್ಟ್ 30 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ದೇವಣಗಾಂವ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಹೊಸ ಸೇತುವೆ ಸುಗಮ ಸಂಚಾರಕ್ಕೆ ಹೊಸ ದಾರಿ ಅಭಿವೃದ್ಧಿಯತ್ತ ದೇವಣಗಾಂವ್ ಗ್ರಾಮದ ಮತ್ತೊಂದು ಹೆಜ್ಜೆ..!

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಗಾಲಿಬಸಾಹೇಬ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button