ಡಾ, ನಾರಾಯಣ ಸುಬ್ಬರಾವ್ ಹಾಡೇಕರ್ ಅವರ – 51 ನೇ. ಪುಣ್ಯತಿಥಿ ಆಚರಣೆ.
ವಿಜಯಪುರ ಆ.27


ಸೇವಾದಳದ ಸಂಸ್ಥಾಪಕರಾದ ಡಾ, ನಾರಾಯಣ ಸುಬ್ಬರಾವ್ ಹಾಡೇಕರ್ ಅವರ 51 ನೇ. ಪುಣ್ಯತಿಥಿಯನ್ನು ಆಗಸ್ಟ್ 26, 2026 ರಂದು ಅತ್ಯಂತ ಗೌರವ ಹಾಗೂ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ಸಮಾಜ ಸೇವೆಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ ಡಾ, ನಾರಾಯಣ ಸುಬ್ಬರಾವ್ ಹಾಡೇಕರ್ ಅವರ ಸೇವಾ ಮನೋಭಾವ ಮತ್ತು ಆದರ್ಶಗಳನ್ನು ಸ್ಮರಿಸಿ ಕಾರ್ಯಕ್ರಮದಲ್ಲಿ ಗೌರವ ನಮನ ಸಲ್ಲಿಸಲಾಯಿತು.

ಸೇವಾದಳದ ಸಂಘಟನೆ ಹಾಗೂ ಅದರ ಸೇವಾ ಚಟುವಟಿಕೆಗಳಿಗೆ ಅವರು ನೀಡಿದ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಸೇವಾದಳದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಹಾಗೂ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತು ಕಾಂಗ್ರೆಸ್‌ನ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು.

ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ್ದು, ಪುಣ್ಯತಿಥಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಅಚ್ಚುಕಟ್ಟಾಗಿ ಪೂರ್ಣ ಗೊಂಡಿತು.

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸೇವಾದಳದ ಎಲ್ಲಾ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ವಿವಿಧ ಕಾಂಗ್ರೆಸ್ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು ಮತ್ತು ಅಭಿನಂದನೆಗಳು ಸಲ್ಲಿಸಲಾಯಿತು.

ಡಾ, ನಾರಾಯಣ ಸುಬ್ಬರಾವ್ ಹಾಡೇಕರ್ ಅವರ ಆದರ್ಶ, ಸೇವಾ ಮನೋಭಾವ ಮತ್ತು ಸಂಘಟನಾ ಚಿಂತನೆಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿ ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಗಾಲಿಬಸಾಹೇಬ ನಾಗಾವಿ ದೇವಣಗಾಂವ
