ಶ್ರೀ ಶರಣಬಸವೇಶ್ವರ ದಾಸೋಹ ಮಠದ ವತಿಯಿಂದ ಆ.28 ರಂದು – “ದಾಸೋಹ ಪೂರ್ಣಿಮೆ–2″ಕಾರ್ಯಕ್ರಮ ಜರುಗುವುದು.

ಕಾನಾಮಡುಗು ಆ.27

ಕೂಡ್ಲಿಗಿ ತಾಲೂಕಿನ ಕಾನಾಮಡುಗು ಗ್ರಾಮದ ಶ್ರೀ ಶರಣಬಸವೇಶ್ವರ ದಾಸೋಹ ಮಠದ ವತಿಯಿಂದ ‘ದಾಸೋಹ ಪೂರ್ಣಿಮೆ–2’ ಕಾರ್ಯಕ್ರಮವನ್ನು ಆ.28 ರಂದು ಶುಕ್ರವಾರ ಸಂಜೆ 6 ಗಂಟೆಗೆ ಶ್ರೀಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಕೊಟ್ಟೂರಿನ ಕಟ್ಟೆಮನೆ ಹಿರೇಮಠದ ಶ್ರೀ ಷ.ಬ್ರ.ಯೋಗಿರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕೂಡ್ಲಿಗಿ ಹಿರೇಮಠದ ಶ್ರೀಷ.ಬ್ರ.ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮೀಜಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಶರಣಬಸವೇಶ್ವರ ದಾಸೋಹ ಮಠದ ಶ್ರೀ ದಾ ಮ ಐಮಡಿ ಶರಣಾರ್ಯರು ಅಧ್ಯಕ್ಷತೆ ವಹಿಸಲಿದ್ದಾರೆ.

ಯುಗಧರ್ಮ ತತ್ವ ಪ್ರಚಾರಕರಾದ ಶ್ರೀ ಯುಗಧರ್ಮ ರಾಮಣ್ಣ ಅವರು ಪದ ಮತ್ತು ಮಾತುಗಳ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಚಿಂತನೆಗಳನ್ನು ಹಂಚಿ ಕೊಳ್ಳಲಿದ್ದಾರೆ. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಕೆ.ಎಂ. ಶಶಿಧರ ಹಾಗೂ ನಿವೃತ್ತ ಅಭಿಯಂತರರು ಶ್ರೀ ಬಿ. ಶರಣಪ್ಪ, ಹಗರಿಬೊಮ್ಮನ ಹಳ್ಳಿಯ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಎಂ.ಪಿ.ಎಂ. ಮಂಜುನಾಥ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು, ಧಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಶ್ರೀಮಠದವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ವರದಿಯಾಗಿದೆ.

ಹೋಬಳಿ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button