ವಿಶ್ವವ ತಬ್ಬುವ ಜಗನ್ಮಾತೃತ್ವ ಶಾರದಾಮಾತೆಯವರದು -ಜಿ ಯಶೋಧಾ ಪ್ರಕಾಶ್.

ಚಳ್ಳಕೆರೆ ಆ.27

ಇಡೀ ವಿಶ್ವದ ಸಕಲ ಚರಾಚರ ಜೀವಿಗಳನ್ನು ತಬ್ಬುವ ಜಗನ್ಮಾತೃತ್ವವನ್ನು ಶ್ರೀಮಾತೆ ಶಾರದಾದೇವಿಯವರು ಹೊಂದಿದ್ದರು ಎಂದು ಚಳ್ಳಕೆರೆಯ ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮಾತೆಯ ಮಡಿಲು” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಜ್ಞಾನಯೋಗದ ಶ್ಲೋಕಗಳ ಕಲಿಕಾ ತರಗತಿ,ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ಸಾವಿತ್ರಮ್ಮ, ಜಯಶೀಲಮ್ಮ, ಭಾಗ್ಯಲಕ್ಷ್ಮೀ, ವಿಜಯಲಕ್ಷ್ಮೀ, ಶೈಲಜಾ, ಕೃಷ್ಣವೇಣಿ, ಗೀತಾಲಕ್ಷ್ಮೀ, ಭ್ರಮರಂಬಾ, ಸರಸ್ವತಿ, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ ಸೇರಿದಂತೆ ಸದ್ಭಕ್ತರು ಉಪಸ್ಥಿತರಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Check Also
Close
Back to top button