ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ – ಪಡೆದ ಎಸ್.ಎನ್.ಡಿ ಶಾಲೆ.

ಹುಲ್ಲೂರು ಆ.29

ಮುದ್ದೇಬಿಹಾಳ ತಾಲ್ಲೂಕಿನ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿ ಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600 ಮೀ. ಓಟದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಹಲವು ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಕಬಡ್ಡಿಯಲ್ಲಿ ದ್ವಿತೀಯ, ಥ್ರೋಬಾಲ್‌ನಲ್ಲಿ ಪ್ರಥಮ, 400 ಮೀ. ಓಟದಲ್ಲಿ ಪ್ರಥಮ, 600 ಮೀ. ಓಟದಲ್ಲಿ ದ್ವಿತೀಯ, ಚಕ್ರ ಎಸೆತದಲ್ಲಿ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನಗಳನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎಂ.ಎಸ್. ಕೊಪ್ಪ ಅವರು, ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ, ಕ್ರೀಡೆಯೂ ಅಷ್ಟೇ ಮುಖ್ಯವಾಗಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅತ್ಯುತ್ತಮ ಸಾಧನವಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಉನ್ನತ ಮಟ್ಟದ ಶಿಕ್ಷಣದ ಜೊತೆಗೆ ಕ್ರೀಡಾಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡುತ್ತಿರುವುದು ಸಂತಸದ ವಿಷಯವಾಗಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಾಲೆಯ ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ಮುಂದಿನ ಹಂತದ ಸ್ಪರ್ಧೆಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಇನ್ನಷ್ಟು ಪ್ರಶಸ್ತಿಗಳನ್ನು ಶಾಲೆಗೆ ತಂದು ಕೊಡಬೇಕು ಎಂದು ಆಶಿಸಿದರು.

ವಿದ್ಯಾರ್ಥಿಗಳ ಸಾಧನೆಯ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್, ದೈಹಿಕ ಶಿಕ್ಷಕ ಕುಮಾರ ಹೂಗಾರ, ತರಬೇತುದಾರ ಸಿದ್ದು ಸೇರಿದಂತೆ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಸಂಭ್ರಮಿಸಿದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಬಸವರಾಜ ಸಂಕನಾಳ ಮುದ್ದೇಬಿಹಾಳ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Check Also
Close
Back to top button