ಶಾರದಾಮಾತೆಯವರು ಭಕ್ತರೊಂದಿಗೆ ಆತ್ಮೀಯ ಸಂಬಂಧವನ್ನು ಇಟ್ಟುಕೊಂಡಿದ್ದರು – ಜಿ.ಯಶೋಧಾ ಪ್ರಕಾಶ್.

ಚಳ್ಳಕೆರೆ ಸೆ.03

ಶ್ರೀಮಾತೆ ಶಾರದಾದೇವಿಯವರು ಶಿಷ್ಯರು ಮತ್ತು ಭಕ್ತರೊಂದಿಗೆ ತಾಯ್ತನದ ಆತ್ಮೀಯ ಸಂಬಂಧವನ್ನು ಇಟ್ಟುಕೊಂಡಿದ್ದರು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮಾತೆಯ ಮಡಿಲು” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಆರಂಭದಲ್ಲಿ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯಜ್ಞಾನಯೋಗದ ಶ್ಲೋಕಗಳ ಕಲಿಕಾ ತರಗತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮೀ, ರಶ್ಮಿ, ಸಂಗೀತ, ಶೈಲಜಾ, ಗೀತಾಲಕ್ಷ್ಮೀ, ಭ್ರಮರಂಬಾ, ಸರಸ್ವತಿ, ದಾಕ್ಷಾಯಣಿ, ಕವಿತಾ, ಜಯಮ್ಮ, ಜಯಶೀಲಮ್ಮ, ಭಾಗ್ಯಲಕ್ಷ್ಮೀ ಪಾಲ್ಗೊಂಡಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button