ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ.
ಮೊಳಕಾಲ್ಮುರು ಸೆ.06


ನಿನ್ನೆ ಮೊಳಕಾಲ್ಮೂರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ರಾಜ್ಯ ಸರ್ಕಾರದ “ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ” ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಜನಪ್ರಿಯ ಶಾಸಕರಾದ ಶ್ರೀ ಎನ್. ವೈ ಗೋಪಾಲಕೃಷ್ಣರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.
ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಬೇಕು ಎಂಬುದೇ ನಮ್ಮ ಉದ್ದೇಶ. ಜನರ ಸೇವೆಯೇ ನಮ್ಮ ಆದ್ಯತೆ.
– ಶ್ರೀ ಎನ್. ವೈ. ಗೋಪಾಲಕೃಷ್ಣಶಾಸಕರು, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ತಿಪ್ಪೇಸ್ವಾಮಿ ಎಚ್ ಮೀನಕೇರಿ ಹೊಂಬಾಳೆ ಮೊಳಕಾಲ್ಮುರು

