ಸಾರ್ವಜನಿಕ ನಲ್ಲಿಯಲ್ಲಿ ಹಿಡಿಯಲು ಹೋಗಿ, ಪಂಪ್ ವೈರ್ ಶಾರ್ಟ್ ಸರ್ಕ್ಯೂಟ್ ಆಗಿ – ಜೀವನ ಚೆಲ್ಲಿದ ಜಯಮ್ಮ.

ಕೋಡಿಹಳ್ಳಿ ಸೆ.10

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸುಮಾರು 10:30 ಕ್ಕೆ ಶ್ರೀಮತಿ ಜಯಮ್ಮರವರು 45 ವರ್ಷ, ಮನೆ ಮುಂದೆ ಇರುವ ಸಾರ್ವಜನಿಕ ನಲ್ಲಿಯಲ್ಲಿ ನೀರು ಹಿಡಿಯಲು ಹೋಗಿ ಅದಕ್ಕೆ ಅಳವಡಿಸಿದ ಮೋಟಾರ್ ಪಂಪ್ ವೈರ್ ಶಾರ್ಟ್ ಸರ್ಕ್ಯೂಟ್ ಆಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.‎‎

ಈ ಮುಂಚೆ ತಳಕು ಹೋಬಳಿಯಲ್ಲಿ ಅನೇಕ ರೀತಿಯ ಸಾರ್ವಜನಿಕ ಸ್ಥಳಗಳಲ್ಲಿ ಎಲೆಕ್ಟ್ರಿಕ್ ಶಾಕ್, ಕೆರೆಯಲ್ಲಿ ಈಜಲು ಹೋಗಿ, ಸೂಸೈಡ್, ಬಾವಿಯಲ್ಲಿ ಸ್ನಾನ ಮಾಡಲು ಹೋಗಿ, ರಸ್ತೆ ಅಪಘಾತಗಳಲ್ಲಿ, ಮಾನಸಿಕ ಖಿನ್ನತೆಗೆ ಒಳಗಾಗಿ ಇನ್ನೂ ಜೀವನದಲ್ಲಿ ಬಾಳಿ ಬದುಕಬೇಕು ಎನ್ನುವ ಅದೆಷ್ಟೋ ಹದಿ ಹರೆಯದ ಯುವಕ ಯುವತಿಯರು ಸಾವನ್ನಪ್ಪಿದ್ದಾರೆ, ಅಲ್ಲದೆ ಇಂತಹ ಘಟನೆಗಳು ಸರ್ವೇ ಸಾಮಾನ್ಯವಾಗಿ ನಡೆಯುತ್ತಲೇ ಇವೆ.‎‎

ಅಲ್ಲದೆ ಬೇಸಿಗೆ ರಜೆ ಬಂದಿದೆ ಎಂದರೆ ಪ್ರತಿ ವರ್ಷವು ಸುಮಾರು ವಿದ್ಯಾರ್ಥಿಗಳು ಸಾವಿಗೆ ಶರಣಾಗುತ್ತಿದ್ದಾರೆ ಅದರಲ್ಲೂ ಗ್ರಾಮಿಣ ಪ್ರದೇಶದ ಮಕ್ಕಳು ತುಂಬಾ ಹೆಚ್ಚು ಸಾವನ್ನಪ್ಪುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ.

ಬೋರ್ವೆಲ್ ಮತ್ತು ಕೊಳವೆ ಬಾವಿಗಳು, ಹಾಗೂ ಸಾರ್ವಜನಿಕ ನಲ್ಲಿಗಳ ಸ್ಥಿತಿ ಗತಿಗಳ ಬಗ್ಗೆ ಈಗಲಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಂಡು ಈ ರೀತಿಯ ಸಾವುಗಳು ಮರುಕಳಿಸಿದ ಹಾಗೆ ಸಾರ್ವಜನಿಕರಿಗೆ ನೆಮ್ಮದಿ ಜೀವನ ನಡೆಸಲು ಅನುವು ಮಾಡಿ ಕೊಡಬೇಕು ಎಂಬುದೇ ನಮ್ಮ ಪ್ರಮುಖ ಉದ್ದೇಶ.‎‎

ಹಾಗಾದರೆ ಈ ರೀತಿಯ ಸರಣಿ ಸಾವುಗಳನ್ನು ತಡೆ ಗಟ್ಟುವವರು ಯಾರು..? ಮತ್ತು ಹೇಗೆ..? ಎಂಬ ಯಕ್ಷ ಪ್ರಶ್ನೆ ನಮ್ಮನ್ನು ಕಾಡುತ್ತಿದೆ, ಇದಕ್ಕೆ ಸಂಬಂಧಿಸಿದ ವಿವಿಧ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಗ್ರಾಮ ಪಂಚಾಯಿತಿ, ಬೆಸ್ಕಾಂ ಇಲಾಖೆ, ತಾಲ್ಲೂಕ ಆಡಳಿತ, ಹಾಗೂ ಜಿಲ್ಲಾ ಮಟ್ಟದ ಆಡಳಿತ ಅಧಿಕಾರಿಗಳು ಈ ಘಟನೆಗಳ ಬಗ್ಗೆ ಮಾಹಿತಿ ಪಡೆದು ಕೊಂಡು ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು.

ಈ ರೀತಿಯ ಘಟನೆಗಳು ಮರುಕಳಿಸದಂತೆ ಕುಟುಂಬಗಳಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಚಿತ್ರದುರ್ಗದ ದಲಿತ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷರು ಆದ ಕೋಡಿಹಳ್ಳಿ ಟಿ.ಶಿವಮೂರ್ತಿ ಮನವಿ ಮಾಡಿದ್ದಾರೆ.‎

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button