ಗಣೇಶೋತ್ಸವ ಶಾಂತಿಯುತ ಆಚರಣೆಗೆ – ಪೊಲೀಸ್ ಇಲಾಖೆಯಿಂದ ಸೂಚನೆ.

ದೇವಣಗಾಂವ ಸೆ.11

ಗಣೇಶೋತ್ಸವದ ಹಿನ್ನೆಲೆಯಲ್ಲಿ ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯ ದೇವಣಗಾಂವ್ ಗ್ರಾಮದಲ್ಲಿ ಗುರುವಾರ ಶಾಂತಿ ಸಭೆ ನಡೆಯಿತು. ಗಣೇಶೋತ್ಸವವನ್ನು ಶಾಂತಿಯುತವಾಗಿ, ಸೌಹಾರ್ದಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಆಚರಿಸುವಂತೆ ಗ್ರಾಮಸ್ಥರು ಹಾಗೂ ಗಣೇಶೋತ್ಸವ ಸಮಿತಿಯ ಮುಖಂಡರಿಗೆ ಪೊಲೀಸ್ ಇಲಾಖೆಯ ವತಿಯಿಂದ ಸೂಕ್ತ ಸೂಚನೆಗಳನ್ನು ನೀಡಲಾಯಿತು.

ಗಣೇಶೋತ್ಸವ ಸಂದರ್ಭದಲ್ಲಿ ಸಾರ್ವಜನಿಕರು ಪರಸ್ಪರ ಸಹಕಾರ, ಸೌಹಾರ್ದತೆ ಮತ್ತು ಶಾಂತಿ ಕಾಪಾಡಿ ಕೊಂಡು ಹಬ್ಬವನ್ನು ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸ ಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.

ಗ್ರಾಮದಲ್ಲಿ ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಭಾತೃತ್ವದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ. ಪೊಲೀಸ್ ಇಲಾಖೆಯ ಮಾರ್ಗ ಸೂಚಿಗಳನ್ನು ಪಾಲಿಸಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಶಾಂತಿ ಮತ್ತು ಸೌಹಾರ್ದಯುತ ಗಣೇಶೋತ್ಸವಕ್ಕೆ ಕರೆ ನೀಡಲಾಯಿತು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಗಾಲಿಬಸಾಹೇಬ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button