ಮಾತೃ ವಾತ್ಸಲ್ಯದ ಶುದ್ಧ ರೂಪವೇ ಶ್ರೀಮಾತೆ ಶಾರದಾ ದೇವಿ – ಶ್ರೀಮತಿ ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಸೆ.13


ಶ್ರೀಮಾತೆ ಶಾರದಾದೇವಿಯವರು ತಮ್ಮ ಶಿಷ್ಯರು ಮತ್ತು ಭಕ್ತರ ಮೇಲೆ ಹರಿಸುತ್ತಿದ್ದ ಮಾತೃ ವಾತ್ಸಲ್ಯವು ಅವರ್ಣನಿ ಯವಾದದ್ದು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಶ್ರೀಶಾರದಾದೇವಿ ಜೀವನಗಂಗಾ ಗ್ರಂಥ ಪಾರಾಯಣ ಮಾಡುತ್ತ “ಮಾತೆಯ ಮಡಿಲು” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಪ್ರಯುಕ್ತ ಶ್ರೀರಾಮಕೃಷ್ಣರ ನಾಮಸ್ಮರಣೆ, ವನಜಾಕ್ಷಿ ಮೋಹನ್, ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಜ್ಞಾನಯೋಗದ ಶ್ಲೋಕಗಳ ಕಲಿಕಾ ತರಗತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.

ಸತ್ಸಂಗ ಸಭೆಯಲ್ಲಿ ವಿಜಯಲಕ್ಷ್ಮೀ, ರಶ್ಮಿ, ಸಂಗೀತ, ಶೈಲಜಾ, ಗೀತಾಲಕ್ಷ್ಮೀ, ಭ್ರಮರಂಬಾ, ಸರಸ್ವತಿ, ದಾಕ್ಷಾಯಣಿ, ಕವಿತಾ, ಜಯಮ್ಮ, ವೀರಮ್ಮ, ಸುಧಾಮಣಿ, ಕೃಷ್ಣವೇಣಿ, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಭಾಗ್ಯಲಕ್ಷ್ಮೀ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.
