ಇಂದು ಶಿವಶಕ್ತಿ ನಗರದಲ್ಲಿ ಶ್ರಾವಣ ಮುಕ್ತಾಯ ಸಮಾರಂಭ ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ – ಭಜನಾ ಸಪ್ತಾಹ, ಅಭಿಷೇಕ, ಮಹಾ ಮಂಗಳಾರತಿ ಕಾರ್ಯಕ್ರಮ ಜರುಗುವುದು.
ಕಲಬುರಗಿ ಸೆ.14

ನಗರದ ಸೈಯದ್ ಚಿಚ್ಚೋಳ್ಳಿ ಕ್ರಾಸ್ ಬಳಿಯ ಶಿವಶಕ್ತಿ ನಗರದಲ್ಲಿರುವ ಶರಣ ಹಡಪದ ಅಪ್ಪಣ್ಣನವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮುಕ್ತಾಯ ಸಮಾರಂಭದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸೋಮವಾರ, ಸೆ.14 ರಂದು ರಾತ್ರಿ 9 ಗಂಟೆ ಯಿಂದ ದೇವಸ್ಥಾನದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಬೆಳಿಗ್ಗೆ ಶ್ರಾವಣ ಮಾಸದ ಮುಕ್ತಾಯ (ಕಾಂಡ) ಉತ್ಸವದ ಅಂಗವಾಗಿ ಶ್ರೀ ಹಡಪದ ಅಪ್ಪಣ್ಣನವರ ಮೂರ್ತಿಗೆ ವಿಶೇಷ ಅಭಿಷೇಕ, ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಲಿದೆ.

ಇದೇ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಹೈಮಾಸ್ಟ್ ಲೈಟ್ ಕಂಬದ ಉದ್ಘಾಟನೆ ನಡೆಯಲಿದ್ದು, ಕಲಬುರಗಿ ಜಿಲ್ಲೆಯ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಪಾತಿಮಾ ಮೇಡಂ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಅಧಿಕಾರಿಗಳು ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರದ ಅಂಗಡಿ ಮಾಲೀಕರು, ಜಿಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನಗರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಲಬುರಗಿ ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಮಾಜದ ಹಿರಿಯರು, ಯುವಕರು ಹಾಗೂ ಮಹಿಳಾ ತಾಯಂದಿರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷರಾದ ಈರಣ್ಣ ಸಿ. ಹಡಪದ ಸಣ್ಣೂರ ಜಿ. ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ಮತ್ತು ಕಲಬುರಗಿ ನಗರಾಧ್ಯಕ್ಷ ಮಲ್ಲಿಕಾರ್ಜುನ ಸಾವಳಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

