85 ಕ್ಕೂ ಹೆಚ್ಚು ಗ್ರಾಮಸ್ಥರಿಗೆ ತಪಾಸಣೆ, ಸೇವೆ ಸಲ್ಲಿಸಿದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಗ್ರಾಮಸ್ಥರಿಂದ ಹಾಗೂ ಸಿಹಿ ಕಹಿ ಪತ್ರಿಕೆ ವರದಿಗಾರರಾದ ಗಾಲಿಬಸಾಹೇಬ ನಾಗಾವಿ ಅವರಿಗೆ – ಆತ್ಮೀಯ ಸನ್ಮಾನ ಕಾರ್ಯಕ್ರಮ ಜರಗಿತು.

ದೇವಣಗಾಂವ ಸೆ.16

ಆಲಮೇಲ ತಾಲೂಕಿನ ದೇವಣಗಾಂವ್ ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ವಿಜಯಪುರ ಸರ್ಕಾರಿ ಆಸ್ಪತ್ರೆಯ ವತಿಯಿಂದ ಬುಧವಾರ ಉಚಿತ ಎಕ್ಸ್‌ರೇ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.ಶಿಬಿರದಲ್ಲಿ ವಿಶೇಷವಾಗಿ ಎದೆಯ ಎಕ್ಸ್‌ರೇ ತಪಾಸಣೆ ನಡೆಸಲಾಗಿದ್ದು, ಗ್ರಾಮದ ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಸುಮಾರು 85 ರಿಂದ 90 ಮಂದಿ ಗ್ರಾಮಸ್ಥರು ತಪಾಸಣೆಯ ಸೌಲಭ್ಯ ಪಡೆದು ಕೊಂಡರು.

ಎದೆಯ ಎಕ್ಸ್‌ರೇ ಮೂಲಕ ಶ್ವಾಸಕೋಶ ಹಾಗೂ ಎದೆ ಭಾಗಕ್ಕೆ ಸಂಬಂಧಿಸಿದ ಹಲವು ಆರೋಗ್ಯ ಸಮಸ್ಯೆಗಳ ಕುರಿತು ವೈದ್ಯಕೀಯ ಪರಿಶೀಲನೆಗೆ ಅಗತ್ಯವಾದ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ. ದೀರ್ಘಕಾಲದ ಕೆಮ್ಮು, ಉಸಿರಾಟದ ತೊಂದರೆ, ಎದೆ ನೋವು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿರುವವರಿಗೆ ವೈದ್ಯರ ಸಲಹೆಯಂತೆ ಎಕ್ಸ್‌ರೇ ತಪಾಸಣೆ ಮಾಡಿಸುವುದು ಉಪಯುಕ್ತವಾಗಿದೆ. ಆರಂಭಿಕ ಹಂತದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಅಗತ್ಯವಿದ್ದಲ್ಲಿ ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಗೆ ಮುಂದಾಗಲು ಇಂತಹ ಶಿಬಿರಗಳು ಸಹಕಾರಿ ಯಾಗುತ್ತವೆ.

ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಗ್ರಾಮದಲ್ಲಿಯೇ ಸರ್ಕಾರಿ ಆರೋಗ್ಯ ಸೇವೆ ದೊರೆಯುವಂತಾಗಿರುವುದರಿಂದ ಶಿಬಿರಕ್ಕೆ ಗ್ರಾಮಸ್ಥರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಶಿಬಿರದಲ್ಲಿ ವಿಜಯಪುರ ಸರ್ಕಾರಿ ಆಸ್ಪತ್ರೆಯಿಂದ ಆಗಮಿಸಿದ್ದ ಎಕ್ಸ್‌ರೇ ಸಿಬ್ಬಂದಿ, ದೇವಣಗಾಂವ್ ಆಯುಷ್ಮಾನ್ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಗ್ರಾಮಸ್ಥರಿಗೆ ಅಗತ್ಯ ಸೇವೆ ಹಾಗೂ ಮಾರ್ಗದರ್ಶನ ನೀಡಿದರು.

ಸೇವೆ ಸಲ್ಲಿಸಿದ ಸಿಬ್ಬಂದಿಗೆ ಆತ್ಮೀಯ ಸನ್ಮಾನ:-

ದೇವಣಗಾಂವ್ ಗ್ರಾಮದ ಜನರಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ವಿಜಯಪುರ ಸರ್ಕಾರಿ ಆಸ್ಪತ್ರೆಯಿಂದ ಆಗಮಿಸಿ ದಿನವಿಡೀ ಸೇವೆ ಸಲ್ಲಿಸಿದ ಎಕ್ಸ್‌ರೇ ಸಿಬ್ಬಂದಿಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮದ ವತಿಯಿಂದ ವಿಜಯಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯನ್ನು ಹೃದಯಪೂರ್ವಕವಾಗಿ ಹಾಗೂ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಮಸ್ಥರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಗ್ರಾಮದಲ್ಲಿಯೇ ಎಕ್ಸ್‌ರೇ ತಪಾಸಣಾ ಸೌಲಭ್ಯ ಕಲ್ಪಿಸಲು ಸಹಕರಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.

ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಇಂತಹ ಆರೋಗ್ಯ ತಪಾಸಣಾ ಶಿಬಿರಗಳು ನಿರಂತರವಾಗಿ ನಡೆಯುವುದರಿಂದ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಮತ್ತಷ್ಟು ಸುಲಭವಾಗಿ ದೊರೆಯಲಿದೆ ಎಂಬ ಆಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದರು.

ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಗಾಲಿಬಸಾಹೇಬ ನಾಗಾವಿ ದೇವಣಗಾಂವ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Check Also
Close
Back to top button