ರಾಜ್ಯ ಹೆದ್ದಾರಿ ಕಾಮಗಾರಿಯ ಪ್ರಗತಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಲು – ಕೆ.ಆರ್.ಡಿ.ಎಲ್ ಅಧಿಕಾರಿಗಳಿಗೆ ಸೂಚಿಸಿದ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕರು.
ಮಾನ್ವಿ ಸೆ.17

ಪ್ರವಾಸಿ ಮಂದಿರದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯ ಪ್ರಗತಿ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದಷ್ಟು ಬೇಗನೆ ಮುಗಿಸಲು ಕೆಆರ್ಡಿಲ್, ಲೋಕ ಉಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರೊಂದಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಎನ್.ಎಸ್ ಬೋಸುರಾಜು ಹಾಗೂ ಶಾಸಕರಾದ ಜಿ.ಹಂಪಯ್ಯ ನಾಯಕ ಇವರು ಸಭೆ ನಡೆಸಿದರು.
ಮಾನ್ವಿ ನಗರ ಪೋತ್ನಾಳ ಗ್ರಾಮದಲ್ಲಿ ಕೆಲ ಕಾಮಗಾರಿಗಳು ಬಾಕಿ ಉಳಿದಿರುವುದರಿಂದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದರಿಂದ ಕೂಡಲೇ ಆದಷ್ಟು ಬೇಗನೆ ರಾತ್ರಿ ಹಗಲು ಎನ್ನದೆ ಕಾಮಗಾರಿಯನ್ನು ಮುಗಿಸಿ ಸಾರ್ವಜನಿಕರಿಗೆ ಉಪಯೋಗಕ್ಕೆ ನೀಡಲು ಮಾಜಿ ಸಚಿವರು ಶಾಸಕರು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಗಾಫುರ್ ಸಾಬ್,ತಾಲೂಕು ದಂಡಾಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

