ಶಿಷ್ಯರು ಮತ್ತು ಭಕ್ತರ ಪಾಲಿಗೆ ಶಾರದಾದೇವಿಯವರು ಸ್ವಂತ ತಾಯಿ ಯಾಗಿದ್ದರು – ಶ್ರೀಮತಿ ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಸೆ.18

ಶ್ರೀಮಾತೆ ಶಾರದಾದೇವಿಯವರು ಶಿಷ್ಯರು ಮತ್ತು ಭಕ್ತರ ಪಾಲಿಗೆ ಸ್ವಂತ ತಾಯಿಯಂತೆ ಇರುತ್ತಿದ್ದರು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.
ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಹಮ್ಮಿ ಕೊಂಡಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮಾತೆಯ ಮಡಿಲು” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಜ್ಞಾನ ಯೋಗದ ಶ್ಲೋಕಗಳ ಕಲಿಕಾ ತರಗತಿ ಮತ್ತು ಪ್ರಸಾದ ವಿನಿಯೋಗ ನಡೆಯಿತು.
ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮೀ, ನಾಗರತ್ನಮ್ಮ, ಶೈಲಜಾ, ಕೃಷ್ಣವೇಣಿ, ರಶ್ಮಿ, ಜಯಶೀಲಮ್ಮ, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಜಯಶೀಲಮ್ಮ, ಸರಸ್ವತಿ ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

