ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೇನೆ – ಶಾಸಕ ಜಿ.ಎಚ್ ಶ್ರೀನಿವಾಸ್.

ತರೀಕೆರೆ ಸೆ.18

ಜನ ಸೇವೆಯೇ ಈಶ ಸೇವೆ ಎಂಬಂತೆ ಜನರಿಗೆ ಏನು ಅಗತ್ಯವಿದೆಯೋ ಮೂಲ ಸೌಕರ್ಯಗಳಿಗಾಗಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತಿದ್ದೇನೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿ ಕೊಂಡಿದ್ದೇನೆ ಎಂದು ಶಾಸಕ ಜಿ.ಎಚ್ ಶ್ರೀನಿವಾಸ್ ಹೇಳಿದರು.

ಅವರು ಇಂದು ಬಗ್ಗವಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿ 30 ಲಕ್ಷ ರೂಗಳ ಬಗ್ಗವಳ್ಳಿ ಯಿಂದ ವಡೆಯರಹಳ್ಳಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಯೋಜನೆ ಅಡಿ 20 ಲಕ್ಷ ರೂಗಳ ಅನುದಾನದಲ್ಲಿ ಶ್ರೀ ಮೈಲಾರಲಿಂಗೇಶ್ವರ ಸಮುದಾಯ ಭವನ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದರು.

ಬಗ್ಗವಳ್ಳಿಯ ಕನಕ ನಗರದಲ್ಲಿ ಜಿ.ಎಚ್ ಶ್ರೀನಿವಾಸರವರ ಅಭಿಮಾನಿಗಳು ಏರ್ಪಡಿಸಿದ್ದ ಜಿ.ಎಚ್ ಶ್ರೀನಿವಾಸ್ ಬಡಾವಣೆ ನಾಮ ಪಲಕವನ್ನು ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿ ನೀವೆಲ್ಲರೂ ಸಹ ಅತಿಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದೀರಿ ನನ್ನ ಮೇಲೆ ನೀವು ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಆಭಾರಿ ಯಾಗಿರುತ್ತೇನೆ ಇನ್ನು ಮುಂದೆಯೂ ಸಹ ಎಲ್ಲರೂ ಹೆಚ್ಚಿನ ಮತ ನೀಡುವ ಮೂಲಕ ನನ್ನನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

₹5 ಲಕ್ಷ ಗಳ ಅನುದಾನದಲ್ಲಿ ಸೊಕ್ಕೆ ಗ್ರಾಮದ ಬಸ್ ತಂಗುಧಾನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಸೊಕ್ಕೆ ಪ್ರೌಢಶಾಲೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಾಮಪಲಕ ಅನಾವರಣ ಮಾಡಿ ನಂತರ ಸರ್ಕಾರಿ ಪ್ರಾಥಮಿಕ ಶಾಲೆಯ ಶಾಲಾ ಮುಂಭಾಗದ ಮೇಲ್ಚಾವಣಿ ಹಾಕವ ಕಾಮಗಾರಿ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ಮಾಡಿ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ಉತ್ತಮವಾಗಿ ರೂಪಿಸಿ ಕೊಳ್ಳಬೇಕು ದೇಶದ ಸತ್ ಪ್ರಜೆಗಳಾಗಿ ದೇಶವನ್ನ ಮುನ್ನಡೆಸುವ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೇನೆ ಎಂದು ಹೇಳಿದರು.

ಜಿಲ್ಲಾ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್ ವೆಂಕಟೇಶ್ ತರೀಕೆರೆ ಚಿಕ್ಕಮಗಳೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button